ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು. 1/8
ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ, ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ. 3/8
ಧರ್ಮದ ಹೆಸರಿನಲ್ಲಿ ಪುಂಡಾಟಿಕೆ ನಡೆಸುವ ಮೂಲಕ ಸಂವಿಧಾನದ ಮೇಲೆ ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇಪದೇ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ. 5/8
"ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ." ಕುರಾನ್ ಆಲ್ ಹಿಜ್ರ್ 15