ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌.ಡಿ. ಕುಮಾರಸ್ವಾಮಿ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

Published 21 ಮಾರ್ಚ್ 2024, 14:15 IST
Last Updated 21 ಮಾರ್ಚ್ 2024, 14:15 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಚೆನ್ನೈನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಆರೋಗ್ಯವಾಗಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ, ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಗುರುವಾರ ನಡೆದ ತೆರೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಆರೋಗ್ಯದಲ್ಲೂ ಚೇತರಿಕೆಯಾಗಿದೆ. ಎರಡು–ಮೂರು ದಿನಗಳಲ್ಲಿ ರಾಜ್ಯಕ್ಕೆ ಮರಳಲಿದ್ದಾರೆ. ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT