ಬೆಂಗಳೂರು: ‘ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ನನ್ನ ವೈಭವೀಕರಣ ಬೇಡ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹಾಗೂ ಮಾಜಿ ಶಾಸಕ ಅನ್ನದಾನಿ ಅವರೆಲ್ಲರೂ ಕುಮಾರಣ್ಣನೇ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ದಾರೆ. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸುವ ಈ ವೇದಿಕೆಯಲ್ಲಿ ಮುಖ್ಯಮಂತ್ರಿ ವಿಷಯದ ಬಗ್ಗೆ ಚರ್ಚಿಸುವುದು ಸರಿಯಲ್ಲ. ನಾವು ಬಾಬಾ ಸಾಹೇಬರ ಆದರ್ಶ ಮತ್ತು ತತ್ವಗಳನ್ನು ಅಳವಡಿಸಿಕೊಂಡು ಪಕ್ಷವನ್ನು ಬಲಿಷ್ಠವಾಗಿ ಕಟ್ಟಬೇಕು’ ಎಂದರು.

‘ದೇವರ ದಯೆಯಿಂದ, ಎರಡು ಬಾರಿ ಈ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪೂರ್ಣಪ್ರಮಾಣದ ಬಹುಮತ ಇಲ್ಲದಿದ್ದರೂ ಸಾಧ್ಯವಾದಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ. ಸಮಾಜದ ಎಲ್ಲಾ ವರ್ಗದ ಜನರನ್ನು ಸಮಾನ ದೃಷ್ಟಿಯಲ್ಲಿ ನೋಡಿದ್ದೇನೆ. ನೀವು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಶುಭ ಹಾರೈಸುವುದು, ನನ್ನ ಮೇಲೆ ಇಟ್ಟಿರುವ ಪ್ರೀತಿ ಮತ್ತು ನಂಬಿಕೆಯನ್ನು ಸೂಚಿಸುತ್ತದೆ. ಇಂತಹ ವೇದಿಕೆಯಲ್ಲಿ ರಾಜಕೀಯ ಮಾತನಾಡುವುದು ಬೇಡ’ ಎಂದು ಅವರು ಮುಖಂಡರು ಮತ್ತು ಕಾರ್ಯಕರ್ತರಿಗೆ ಸೂಚಿಸಿದರು.

ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಕೆ. ಅನ್ನದಾನಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಶಾಸಕರಾದ ಟಿ.ಎ. ಶರವಣ, ಟಿ. ಜವರಾಯಿಗೌಡ, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.