ಬೆಂಗಳೂರು: ಭಾರತಕ್ಕೆ ಭೇಟಿ ನೀಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ದೇಶದಲ್ಲಿ ನಡೆಯುತ್ತಿರುವ ಸಿದ್ಧತೆ ಬಗ್ಗೆ ಈಗಾಗಲೇ ಅಪಸ್ವರಗಳು ಕೇಳಿಬಂದಿವೆ. ಟ್ರಂಪ್ ಬರುವ ವೇಳೆ ಕೊಳೆಗೇರಿಗಳು ಕಾಣಿಸದಂತೆ ಗೋಡೆ ನಿರ್ಮಿಸಿರುವುದನ್ನು ಕುರಿತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತದ ಭೇಟಿ ವೇಳೆ ಅಹ್ಮದಾಬಾದ್‌ನ ಕೊಳಗೇರಿಗಳು ಕಾಣಿಸದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ! ಆದರೆ ಅಧಃಪತನಕ್ಕೆ ಕುಸಿದಿರುವ ದೇಶದ ಆರ್ಥಿಕತೆ ಕಾಣಿಸದಂತೆ ಮೋದಿ ಅವರು ಯಾವ ಗೋಡೆ ಕಟ್ಟುತ್ತಾರೆ' ಎಂದು ಪ್ರಶ್ನಿಸಿದ್ದಾರೆ.

'ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿ ಅವರೇ ಉತ್ತರಿಸುವಿರಾ?' ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಟ್ರಂಪ್ ಸ್ವಾಗತದ ಸಿದ್ಧತೆ ಗುಲಾಮಿ ಮನಸ್ಥಿತಿಯ ಪ್ರತೀಕ: ಶಿವಸೇನಾ ಟೀಕೆ

ಟ್ರಂಪ್ ಭೇಟಿಯು ಭಾರತಕ್ಕೆ ಚಕ್ರವರ್ತಿಯೊಬ್ಬರು ಭೇಟಿ ನೀಡುತ್ತಿರುವಂತಿದೆ. ಅದಕ್ಕಾಗಿ ನಡೆಯುತ್ತಿರುವ ಸಿದ್ಧತೆಗಳು ‘ಗುಲಾಮರ ಮನಸ್ಥಿತಿ’ಯನ್ನು ಬಿಂಬಿಸುವಂತಿವೆ ಎಂದು ಶಿವಸೇನಾ ನಿನ್ನೆಯಷ್ಟೇ(ಫೆ.17) ಟೀಕಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.