ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆ ಇಂದು ದೆಹಲಿಗೆ

Published 16 ಜನವರಿ 2024, 22:45 IST
Last Updated 16 ಜನವರಿ 2024, 22:45 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಬುಧವಾರ ದೆಹಲಿಗೆ ತೆರಳಲಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್‌ಗೆ ಚುನಾವಣೆಗೆ ಮೊದಲೇ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೆಲವು ದಿನಗಳಿಂದ ಚರ್ಚೆಗೆ ಗ್ರಾಸವಾಗಿತ್ತು. ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಯೂ ಸದ್ದು ಮಾಡಿತ್ತು.

‘ಕುಮಾರಸ್ವಾಮಿ ಮತ್ತು ಅವರ ಮಗ ನಿಖಿಲ್‌ ಕುಮಾರಸ್ವಾಮಿ ಇಬ್ಬರೂ ಬುಧವಾರ ದೆಹಲಿಗೆ ತೆರಳಲಿದ್ದಾರೆ. ಅಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸುವ ಸಾಧ್ಯತೆ ಇದೆ. ಸಂಪುಟದಲ್ಲಿ ಸ್ಥಾನ ನೀಡುವ ಕುರಿತು ಯಾವುದೇ ಮಾಹಿತಿ ಇಲ್ಲ’ ಎಂದು ಕುಮಾರಸ್ವಾಮಿ ಅವರ ಆಪ್ತ ಮೂಲಗಳು ತಿಳಿಸಿವೆ.

ಗುರುವಾರ ಅಥವಾ ಶುಕ್ರವಾರ ಕುಮಾರಸ್ವಾಮಿ ಅವರು ದೆಹಲಿಯಿಂದ ಬೆಂಗಳೂರಿಗೆ ವಾಪಸಾಗುವರು. ನಂತರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ತರ ಪ್ರದೇಶಕ್ಕೆ ತೆರಳುವರು ಎಂದು ಮೂಲಗಳು ಹೇಳಿವೆ.

ಬಿಜೆಪಿ ಜಿಲ್ಲಾ ಘಟಕ: ಪದಾಧಿಕಾರಿಗಳ ನೇಮಕಕ್ಕೆ ಸೂಚನೆ

ಬೆಂಗಳೂರು: ಪಕ್ಷದ ಜಿಲ್ಲಾ ಘಟಕಗಳ ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ಆರಂಭಿಸುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೂಚನೆ ನೀಡಿದರು.

ಹೊಸದಾಗಿ ನೇಮಕಗೊಂಡ ಜಿಲ್ಲಾ ಘಟಕಗಳ ಅಧ್ಯಕ್ಷರ ಜತೆ ಮಂಗಳವಾರ ವರ್ಚುವಲ್ ಸಭೆ ನಡೆಸಿದ ಅವರು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಪಕ್ಷಕ್ಕಾಗಿ ಹಗಲಿರುಳು ದುಡಿಯುವ ಉತ್ಸಾಹಿ ತಂಡವನ್ನು ಕಟ್ಟಬೇಕು. ಆ ಬಳಿಕ ಜಿಲ್ಲಾ ಪ್ರವಾಸವನ್ನು ನಡೆಸಿ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಅಣಿಗೊಳಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಗಳಲ್ಲಿ ವಿಕಸಿತ ಭಾರತ ಯಾತ್ರೆಗಳನ್ನು ಹೆಚ್ಚು ಪ್ರಮಾಣದಲ್ಲಿ ನಡೆಸಬೇಕು ಮತ್ತು ಕಾರ್ಯಕರ್ತರು ನಮೋ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಲು ಆದ್ಯತೆ ನೀಡಬೇಕು. ಜನಸಂಪರ್ಕವನ್ನು ಹೆಚ್ಚಿಸಬೇಕು ಎಂದು ಹೇಳಿದರು.

ರಾಜ್ಯ ಘಟಕದ ಪದಾಧಿಕಾರಿಗಳು ಜಿಲ್ಲಾ ಪ್ರವಾಸಗಳನ್ನು ಆರಂಭಿ ಸಬೇಕು. ಕ್ಲಸ್ಟರ್‌ಗಳ ಸಭೆಯ ಬಳಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿ ದಂತೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದೂ ವಿಜಯೇಂದ್ರ ತಿಳಿಸಿದರು. ಸುಮಾರು ಒಂದು ಗಂಟೆ ಸಭೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT