ಕೇಂದ್ರ ಸರ್ಕಾರದ ಹೊಸ ನೀತಿಯ ಅನ್ವಯ ರೋಗಗ್ರಸ್ತ ಕೈಗಾರಿಕೆಗಳಿಗೆ ಶಾಶ್ವತವಾಗಿ ಬೀಗ ಜಡಿಯುವ ಹಾಗೂ ಅಂತಹ ಉದ್ದಿಮೆಗಳ ಬಂಡವಾಳವನ್ನು ಸಂಪೂರ್ಣ ಹಿಂತೆಗೆಯಲಾಗುತ್ತಿದೆ. ಕುಮಾರಸ್ವಾಮಿ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಹಿಂದೂಸ್ಥಾನ್ ಮಿಷನ್ ಟೂಲ್ಸ್ (ಎಚ್‌ಎಂಟಿ), ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್‌ಎಲ್) ಸೇರಿದಂತೆ ಒಂದು ಕಾಲದಲ್ಲಿ ಭಾರತದ ಕೈಗಾರಿಕಾ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಹಲವು ಕೈಗಾರಿಕೆಗಳಿಗೆ ಅಗತ್ಯವಾದ ಮರು ಬಂಡವಾಳ ಹೂಡಿಕೆ ಮಾಡಲು ಚಿಂತನೆ ನಡೆಸಿದ್ದಾರೆ.