ಬೆಳಗಾವಿ: ‘ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ’ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಸಲಹೆ ನೀಡಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘12 ಮಂದಿ ಶಾಸಕರು ರಾಜೀನಾಮೆ ನೀಡಿರುವುದು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಎಲ್ಲರನ್ನೂ ಮಂತ್ರಿ ಮಾಡುವುದಕ್ಕೆ ಆಗುವುದಿಲ್ಲ. ಹೀಗಾಗಿ, ವಿಧಾನಸಭಾಧ್ಯಕ್ಷರು ಶಾಸಕರ ರಾಜೀನಾಮೆ ಸ್ವೀಕರಿಸಬೇಕು’ ಎಂದು ಒತ್ತಾಯಿಸಿದರು.

‘ಚುನಾವಣೆಗೆ ಹೋಗುವುದೇ ಒಳ್ಳೆಯದು’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.