ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜ್ಯಪಾಲರ ನಿರ್ಣಯ ಪ್ರಜಾಪ್ರಭುತ್ವಕ್ಕೆ ಅಪಚಾರ’

Last Updated 27 ಜುಲೈ 2019, 19:56 IST
ಅಕ್ಷರ ಗಾತ್ರ

ವಿಜಯಪುರ: ‘ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ನೀಡುವ ಮೂಲಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರಜಾಪ್ರಭುತ್ವಕ್ಕೆ ಅಪಚಾರ ಎಸಗಿದ್ದಾರೆ’ ಎಂದು ಶಾಸಕ ಎಚ್.ಕೆ.ಪಾಟೀಲ ಶನಿವಾರ ಇಲ್ಲಿ ಟೀಕಿಸಿದರು.

‘ಕಾಂಗ್ರೆಸ್, ಸರ್ಕಾರ ರಚಿಸಲು ಹಕ್ಕು ಮಂಡಿಸಿರಲಿಲ್ಲ. ಯಡಿಯೂರಪ್ಪ ಅವರು 111 ಶಾಸಕರ ಸಂಖ್ಯೆಯನ್ನೂ ತೋರಿಸಿಲ್ಲ. ಆದರೂ, ತರಾತುರಿಯಲ್ಲಿ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಲಾಗಿದೆ. ರಾಜ್ಯಪಾಲರು ಎಲ್ಲರಿಗೂ ಕಾಣುವಂತೆ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಆಕ್ಷೇಪಿಸಿದರು.

‘ನಮ್ಮ ಕೆಲವು ಶಾಸಕರು ಮೋಸ ಮಾಡಿ ಹೋಗಿದ್ದಾರೆ. ಅವರನ್ನು ಆದಷ್ಟು ಬೇಗ ಸ್ಪೀಕರ್ ಅನರ್ಹಗೊಳಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT