ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಎಚ್.ಎನ್.ಕೃಷ್ಣ ಸೇರಿದಂತೆ ಆರು ಮಂದಿಯ ವಿರುದ್ಧ ರಾಜ್ಯ ಅಪರಾಧ ತನಿಖಾ ದಳವು (ಸಿಐಡಿ) ಮಾಡಿದ್ದ ಆರೋಪಗಳಿಂದ ಮುಕ್ತಗೊಳಿಸಿ, ಒಂದನೇ ಎಸಿಜೆಎಂ ನ್ಯಾಯಾಲಯವು ಏಪ್ರಿಲ್ 30ರಂದು ಆದೇಶಿಸಿದೆ.

ಪ್ರಕರಣದ ತನಿಖೆ ನಡೆಸಿದ ಸಿಐಡಿ ಪೊಲೀಸರು, 2012ರಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿಗಳ ವಿರುದ್ಧ ಪ್ರಾಸಿಕ್ಯೂಷನ್ ಮಾಡಿದ್ದ ಆರೋಪಗಳನ್ನು ಸಾಬೀತು ಪಡಿಸುವಲ್ಲಿ ವಿಫಲವಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿರುವ ನ್ಯಾಯಾಧೀಶರು, ಆರು ಮಂದಿಯನ್ನು ಖುಲಾಸೆಗೊಳಿಸಿದ್ದಾರೆ.

1998–99ನೇ ಸಾಲಿನಲ್ಲಿ ನಡೆದಿದ್ದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಆಯ್ಕೆಯಲ್ಲಿ ಎಚ್.ಎನ್.ಕೃಷ್ಣ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.

2 ಹಾಗೂ 3ನೇ ಆರೋಪಿಗಳಾಗಿದ್ದ ಆಶಾ ಪರ್ವೀನ್ ಹಾಗೂ ಸಲ್ಮಾ ಪಿರ್ದೋಸ್ ಅವರು ಖೊಟ್ಟಿ ದಾಖಲೆಗಳನ್ನು ಸಲ್ಲಿಸಿದ್ದಾರೆ ಹಾಗೂ ಲೋಕಸೇವಾ ಆಯೋಗದ ಸಿಬ್ಬಂದಿಯಾಗಿದ್ದ ಕೆ.ನರಸಿಂಹ, ಪಿ.ಗೋಪಿಕೃಷ್ಣ, ಎಂ.ಬಿ.ಬಣಕಾರ್ ಅವರು ಅಧ್ಯಕ್ಷರಿಗೆ ಸಹಕರಿಸಿದ್ದಾರೆ ಎಂದು ಸಿಐಡಿ ಆರೋಪಿಸಿತ್ತು. ಇವರೆಲ್ಲರ ಮೇಲಿನ ಆರೋಪಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಎಚ್.ಎನ್.ಕೃಷ್ಣ ಅವರನ್ನು 2011ರಲ್ಲಿ ಸಿಐಡಿ ತನಿಖಾ ತಂಡ ಬಂಧಿಸಿತ್ತು. ನೇಮಕಾತಿಯಲ್ಲಿ ಅಕ್ರಮ, ಅಧಿಕಾರದ ದುರುಪಯೋಗದ ಆರೋಪಗಳನ್ನು ಹೊರಿಸಲಾಗಿತ್ತು. ಕೃಷ್ಣ ತಮ್ಮ ವಿರುದ್ಧ ದಾಖಲಾದ ಪ್ರಕರಣದ ಸಂಬಂಧ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕವಾಗಿ ತಡೆ ನೀಡಿತ್ತು. ನಂತರ, ನ್ಯಾಯಾಲಯದ ಆದೇಶ ಮೇರೆಗೆ ತನಿಖೆ ನಡೆಸಿದ್ದ ಸಿಐಡಿ, ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-51-1620160051

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.