ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಂದ್ರದ ನೆರವಿಗೆ ಅರೆಬೆಂದ ಮಾಹಿತಿ: ಕೇಂದ್ರ ಸಚಿವರ ವಾಗ್ದಾಳಿ

Published 28 ಜೂನ್ 2024, 20:21 IST
Last Updated 28 ಜೂನ್ 2024, 20:21 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯದ ಬಾಕಿ ಇರುವ ಯೋಜನೆಗಳಿಗೆ ಕೇಂದ್ರ ಸರ್ಕಾರದ ನೆರವು ಕೋರುವಾಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅರೆಬೆಂದ ಮಾಹಿತಿ ನೀಡುತ್ತಿದೆ ಎಂದು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು. 

ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ರಾಜ್ಯದ ಕೇಂದ್ರ ಸಚಿವರು ಮತ್ತು ಸಂಸದರೊಂದಿಗೆ ಸಭೆ ನಡೆಸಿ, ಕೇಂದ್ರದಲ್ಲಿ ಬಾಕಿ ಇರುವ ರಾಜ್ಯ ಯೋಜನೆಗಳಿಗೆ ಶೀಘ್ರ ಅನುಮತಿ ಪಡೆಯಲು ನೆರವು ಕೋರಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ರಾಜ್ಯಕ್ಕೆ ಅನುದಾನ ನೀಡುವ ವಿಷಯದಲ್ಲಿ ಕೇಂದ್ರ ಮಲತಾಯಿ ಧೋರಣೆ ತಳೆದಿಲ್ಲ. ಬದಲಿಗೆ ಅದು ಬಯಸಿದ್ದಕ್ಕಿಂತ ಹೆಚ್ಚಿನದನ್ನು ನೀಡಿದೆ ಎಂದು ಸ್ಪಷ್ಟವಾಗಿ ಹೇಳಿದರು.

ರಾಜ್ಯ ನಾಯಕರು ಸತ್ಯಾಂಶಗಳನ್ನು ತಿರುಚಿ ತಪ್ಪುದಾರಿಗೆಳೆಯುವ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ ನಿರ್ಮಲಾ, ಕರ್ನಾಟಕಕ್ಕೆ ಜಿಎಸ್‌ಟಿ ಬಾಕಿ ಉಳಿಸಿಕೊಂಡಿಲ್ಲ ಎಂದರು. 

ಮೇಕೆದಾಟು ಸೇರಿದಂತೆ ನ್ಯಾಯಾಲಯದಲ್ಲಿ ಯಾವುದೇ ಬಾಕಿ ಉಳಿದಿರುವ ಯೋಜನೆಗಳಿಗೆ ರಾಜ್ಯ ಸರ್ಕಾರ ಕೇಂದ್ರವನ್ನು ದೂಷಿಸಬಾರದು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ರಾಜ್ಯ ಸರ್ಕಾರವು ಕೇಂದ್ರದ ವಿರುದ್ಧ ಪ್ರತಿಭಟಿಸುವ ಬದಲು ಒಕ್ಕೂಟ ವ್ಯವಸ್ಥೆಯನ್ನು  ಗೌರವಿಸಿ ಕೇಂದ್ರ ಸರ್ಕಾರದೊಂದಿಗೆ ಕೆಲಸ ಮಾಡಬೇಕು ಎಂದು ಕೇಂದ್ರ ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT