ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವರ್ಗ–1ಕ್ಕೆ ಹಳ್ಳಿಕಾರ್‌ ಸಮುದಾಯ: ತಂಗಡಗಿ ಭರವಸೆ

Published 9 ಜುಲೈ 2023, 15:19 IST
Last Updated 9 ಜುಲೈ 2023, 15:19 IST
ಅಕ್ಷರ ಗಾತ್ರ

ಬೆಂಗಳೂರು: ಒಕ್ಕಲಿಗ ಸಮುದಾಯದ ಉಪಪಂಗಡ ಹಳ್ಳಿಕಾರ್‌ ಒಕ್ಕಲಿಗರನ್ನು ಹಿಂದುಳಿದ ವರ್ಗದ 3–ಎ ಪ್ರವರ್ಗದಿಂದ, ಪ್ರವರ್ಗ–1 ಕ್ಕೆ ಸೇರಿಸುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.

ಆರ್‌ಎಂಆರ್ ಫೌಂಡೇಷನ್ ಟ್ರಸ್ಟ್‌ ಭಾನುವಾರ ಏರ್ಪಡಿಸಿದ್ದ ಹಳ್ಳಿಕಾರ್ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಈ ವಿಷಯ ತಿಳಿಸಿದರು.

ಸಣ್ಣ– ಸಣ್ಣ ಸಮುದಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕಾಳಜಿ ಹೊಂದಿದ್ದು, ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ. ಹಳ್ಳಿಕಾರ್‌ ಸಮುದಾಯವನ್ನು ಪ್ರವರ್ಗ–1 ಅಡಿ ತರಬೇಕು ಎಂಬ ಮನವಿಯನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದರು.

ಹಳ್ಳಿಕಾರ್‌ ತಳಿಯ ಹಸುಗಳನ್ನು ಸಮಾಜಕ್ಕೆ ಕೊಟ್ಟ ಕೀರ್ತಿ ಹಳ್ಳಿಕಾರ್ ಸಮಾಜದ್ದು, ಮುಂದಿನ ದಿನಗಳಲ್ಲಿ ಈ ಸಮುದಾಯದ ವಿದ್ಯಾರ್ಥಿಗಳು ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವ ಎಚ್‌.ಎಂ.ರೇವಣ್ಣ, ವಿಧಾನಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌, ಮಾಜಿ ಶಾಸಕ ಕೆ.ಚಂದ್ರಶೇಖರ್‌ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT