ಹಂಪಾಪುರ: ಎಚ್.ಡಿ.ಕೋಟೆಯಿಂದ ಗದ್ದಿಗೆ ಸಂಪರ್ಕ ಕಲ್ಪಿಸುವ ದಾರಿಯಲ್ಲಿನ ಭೋಗೇಶ್ವರ ಕಾಲೊನಿ ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಮೂರು ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.

ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದಿರುವುದು ರೈತರಿಗೆ ತಿಳಿದಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಇಲಾಖೆ ಸಿಬ್ಬಂದಿ, ಚಿರತೆಯನ್ನು ವೈದ್ಯಕೀಯ ತಪಾಸಣೆ ನಡೆಸಿ ನಾಗರಹೊಳೆ ಅರಣ್ಯಕ್ಕೆ ಬಿಟ್ಟಿದ್ದಾರೆ.

ಕಳೆದೊಂದು ತಿಂಗಳಿನಿಂದ ಈ ಭಾಗದ ರೈತರ ಜಮೀನಿನಲ್ಲಿ ದನ, ಕರು,ನಾಯಿ ಬೇಟೆಯಾಡಿ ರೈತರಿಗೆ ಆತಂಕವನ್ನುಂಟು ಮಾಡಿತ್ತು.

ಚಿರತೆಯ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ರೈತರು ವಲಯ ಅರಣ್ಯ ಕಚೇರಿಗೆ ವಿಚಾರ ತಿಳಿಸಿದ್ದರು. ನಂತರ ಗ್ರಾಮದ ಶಿವಲಿಂಗೇಗೌಡ ಎಂಬುವರ ಜಮೀನಿನಲ್ಲಿ ಬೋನು ಇಡಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-37-908565382

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.