ಬೆಂಗಳೂರು: ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ನಿಯಮ ಉಲ್ಲಂಘಿಸಿ ಯಾವುದೇ ಕಾಮಗಾರಿಗಳನ್ನು ನಡೆಸಿಲ್ಲ ಎಂದು ಹಿಂದಿನ ಕುಲಪತಿ ಪ್ರೊ.ಮಲ್ಲಿಕಾ ಘಂಟಿ ಸ್ಪಷ್ಟಪಡಿಸಿದ್ದಾರೆ.

ನಿಯಮ ಉಲ್ಲಂಘಿಸಿ ₹36 ಕೋಟಿ ಕಾಮಗಾರಿ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಪರಿಷತ್ ಆಕ್ಷೇಪ ಎತ್ತಿದೆ ಎಂಬ ವರದಿಯ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಉನ್ನತ ಶಿಕ್ಷಣ ಪರಿಷತ್ ನಂತರ ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ (ಆರ್ ಯು ಎಸ್ ಎ) ದ ಅಧಿಕಾರಿಗಳು ವಿಶ್ವವಿದ್ಯಾಲಯಕ್ಕೆ ಬಂದು ಎಲ್ಲ ಕಾಮಗಾರಿಗಳನ್ನು ವೀಕ್ಷಿಸಿ ತೃಪ್ತಿ ವ್ಯಕ್ತಪಡಿಸಿದ್ದಾರೆ. ಜೊತೆಗೆ ಇನ್ನೂ ₹ 5 ಕೋಟಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆರ್ ಯು ಎಸ್ ಎ ಅನುದಾನದ ಅಡಿ ಕೈಗೊಳ್ಳಲಾದ ಎಲ್ಲ ಕಾಮಗಾರಿಗಳು ಕೆಟಿಟಿಪಿ ಮತ್ತು ಆರ್ ಯು ಎಸ್ ಎ ನಿಯಮಾವಳಿಯ ಪ್ರಕಾರವೇ ನಡೆದಿದೆ ಎಂದು ಅಧಿಕಾರಿಗಳು ವರದಿ ನೀಡಿದ್ದಾರೆ. ಇದಲ್ಲದೆ 16 ಹೆಚ್ಚು ವಿಶ್ವವಿದ್ಯಾಲಯಗಳಿಂದ ಬಂದ ಕುಲಪತಿಗಳು ಮತ್ತು ಉನ್ನತ ಅಧಿಕಾರಿಗಳೂ ಕಾಮಗಾರಿಗಳನ್ನು ಪರಿಶೀಲಿಸಿ ವರದಿ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.