ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಗಲ್‌ ಪ್ರಕರಣ: ಎಸ್‌ಐಟಿ ರಚನೆಗೆ ಆಗ್ರಹಿಸಿ ಜ.20ರಂದು ಪ್ರತಿಭಟನೆ

Published 18 ಜನವರಿ 2024, 15:26 IST
Last Updated 18 ಜನವರಿ 2024, 15:26 IST
ಅಕ್ಷರ ಗಾತ್ರ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ವಹಿಸುವಂತೆ ಆಗ್ರಹಿಸಿ ಹಾವೇರಿ ಜಿಲ್ಲಾ ಪೊಲೀಸ್‌ ಕಚೇರಿ ಎದುರು ಬಿಜೆಪಿ ಶನಿವಾರ (20 ರಂದು) ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಮೂಹಿಕ ಅತ್ಯಾಚಾರ, ನೈತಿಕ ಪೊಲೀಸ್‌ ಗಿರಿ ಪ್ರಕರಣವನ್ನು ಪೊಲೀಸರು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದರು. ಹಾವೇರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಗೃಹ ಸಚಿವರು ಪ್ರಕರಣ ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ. ಆದರೆ, ಈಗ ಹಾನಗಲ್‌ ಪೊಲಿಸರನ್ನು ಅಮಾನತು ಮಾಡಿದ್ದು ಲೋಪವಾಗಿರುವುದನ್ನು ಸಾಬೀತು ಮಾಡಿದೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ. ಪೊಲೀಸರು ಕಾನೂನು ಪ್ರಕಾರ ನಡೆದುಕೊಂಡಿಲ್ಲ.  ಸಂತ್ರಸ್ತೆಗೆ ಸರಿಯಾದ ಚಿಕಿತ್ಸೆ ಕೊಡಿಸಿಲ್ಲ. ಮುಖ್ಯಮಂತ್ರಿ ಸಹ ನಿರ್ಲಕ್ಷ್ಯ ಮಾಡಿದ್ದಾರೆ. ಹಾಗಾಗಿ, ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಬೇಕು ಎನ್ನುವುದು ಪಕ್ಷದ ಆಗ್ರಹ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ ಪಕ್ಷದ ಹಲವು ನಾಯಕರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT