ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ: ಆರೋಪಿಗಳ ಸಂಖ್ಯೆ 10ಕ್ಕೆ; ಹೈದರಾಬಾದ್‌ನಲ್ಲಿ ತೌಸಿಫ್‌ ಸೆರೆ

Published 18 ಜನವರಿ 2024, 14:18 IST
Last Updated 18 ಜನವರಿ 2024, 14:19 IST
ಅಕ್ಷರ ಗಾತ್ರ

ಹಾವೇರಿ: ಹಾನಗಲ್‌ ತಾಲ್ಲೂಕಿನ ನಾಲ್ಕರ್‌ ಕ್ರಾಸ್‌ ಸಮೀಪ ಜ.8ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಈವರೆಗೆ ಒಟ್ಟು 10 ಆರೋಪಿಗಳನ್ನು ಬಂಧಿಸಿದಂತಾಗಿದೆ.

ಅಕ್ಕಿಆಲೂರಿನ ಮೀನು ವ್ಯಾಪಾರಿ ಇಬ್ರಾಹಿಂ ಖಾದರ್‌ ಗೌಸ್‌ (27) ಮತ್ತು ಕಾರು ಚಾಲಕ ತೌಸಿಫ್‌ ಅಹಮದ್‌ ಚೌಟಿ ಅಲಿಯಾಸ್‌ ಕಾಟ್ಲ (25) ಈ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದಿನದಿಂದ ದಿನಕ್ಕೆ ಆರೋಪಿಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದ್ದು, ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಘಟನೆ ನಂತರ ತಲೆಮರೆಸಿಕೊಂಡಿದ್ದ ಇಬ್ರಾಹಿಂ, ಅಕ್ಕಿಆಲೂರಿನಲ್ಲೇ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಪೊಲೀಸರಿಗೆ ಯಾವ ಸುಳಿವೂ ಬಿಟ್ಟುಕೊಡದೆ ತಲೆಮರೆಸಿಕೊಂಡಿದ್ದ ತೌಸಿಫ್‌ನನ್ನು ಪೊಲೀಸ್‌ ವಿಶೇಷ ತನಿಖಾ ತಂಡ ಹೈದರಾಬಾದ್‌ನಲ್ಲಿ ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜತೆಗೆ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಇತರ ಆರೋಪಿಗಳು:

ಅಕ್ಕಿಆಲೂರಿನ ಗ್ಯಾರೇಜ್‌ ಕಾರ್ಮಿಕ ಅಫ್ತಾಬ್‌ ಚಂದನಕಟ್ಟಿ (24), ವ್ಯಾಪಾರಿ ಮಾದರಸಾಬ್‌ ಮಂಡಕ್ಕಿ (23), ಆಟೊ ಚಾಲಕ ಅಬ್ದುಲ್ ಖಾದರ್‌ ಜಾಫರಸಾಬ್‌ ಹಂಚಿನಮನಿ (28), ಹಾಲಿನ ವ್ಯಾಪಾರಿ ಇಮ್ರಾನ್‌ ಬಶೀರ್‌ ಅಹಮದ್‌ ಜೇಕಿನಕಟ್ಟಿ (23), ಗ್ಯಾರೇಜ್‌ ಕಾರ್ಮಿಕ ರೇಹಾನ್‌ ಮಹಮ್ಮದ್‌ ಹುಸೇನ್ ವಾಲೀಕಾರ (19), ಸಂತೆ ವ್ಯಾಪಾರಿ ಸಾದಿಕ್ ಬಾಬುಸಾಬ್ ಅಗಸಿಮನಿ (29), ಹೋಟೆಲ್ ಕಾರ್ಮಿಕ ಶೋಯೆಬ್ ನಿಯಾಜ್ ಅಹ್ಮದ್ ಮುಲ್ಲಾ (19), ಮಫೀದ್‌ ಓಣಿಕೇರಿ (23).

ಆರೋಪಿಗೆ ಕಿಮ್ಸ್‌ನಲ್ಲಿ ಚಿಕಿತ್ಸೆ:

ಪ್ರಕರಣಕ್ಕೆ ಸಂಬಂಧಿಸಿದ ಇನ್ನೊಬ್ಬ ಆರೋಪಿ ಮಹಮ್ಮದ್ ಸೈಫ್‌ ಸಾವಿಕೇರಿ ಎಂಬಾತ ಅಪಘಾತದಲ್ಲಿ ಕಾಲಿನ ಮೂಳೆ ಮುರಿದುಕೊಂಡು, ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಒಂದು ವಾರ ಚಿಕಿತ್ಸೆ ಪಡೆದಿದ್ದ. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಚಿಕಿತ್ಸೆ ಪೂರ್ಣಗೊಂಡ ಬಳಿಕ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT