ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

Published 15 ಜನವರಿ 2024, 4:51 IST
Last Updated 15 ಜನವರಿ 2024, 4:51 IST
ಅಕ್ಷರ ಗಾತ್ರ

ಹಾವೇರಿ: ಹಾನಗಲ್‌ನಲ್ಲಿ ಜ.8ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದುವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಿದಂತಾಗಿದೆ.

ಅಕ್ಕಿಆಲೂರಿನ ಸಂತೆ ವ್ಯಾಪಾರಿ ಸಾದಿಕ್ ಬಾಬುಸಾಬ್ ಅಗಸಿಮನಿ (29) ಮತ್ತು ನಿಯಾಜ್ ಅಹ್ಮದ್ ಮುಲ್ಲಾ (19) ಬಂಧಿತ ಆರೋಪಿಗಳು.

ಅಕ್ಕಿಆಲೂರಿನ ಇಮ್ರಾನ್‌ ಬಶೀರ ಅಹಮದ್‌ ಜೇಕಿನಕಟ್ಟಿ (23) ಹಾಗೂ ರೇಹಾನ್‌ ಮಹಮ್ಮದ್‌ ಹುಸೇನ್ ವಾಲೀಕಾರ (19) ಎಂಬುವರನ್ನು ಭಾನುವಾರ ಬಂಕಾಪುರ ಮತ್ತು ದಾವಣಗೆರೆಯಲ್ಲಿ ಬಂಧಿಸಲಾಗಿತ್ತು.

ಇದಕ್ಕೂ ಮುನ್ನ, ಪ್ರಕರಣ ದಾಖಲಾದ ಬೆನ್ನಲ್ಲೇ ಅಕ್ಕಿಆಲೂರಿನ ಅಫ್ತಾಬ್‌ ಚಂದನಕಟ್ಟಿ, ಮದರಸಾಬ್‌ ಮಂಡಕ್ಕಿ ಹಾಗೂ ಅಬ್ದುಲ್ಲಾಖಾದರ್‌ ಜಾಫರಸಾಬ್‌ ಹಂಚಿನಮನಿ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಇನ್ನೊಬ್ಬ ಆರೋಪಿ ಮಹಮದ್ ಸೈಫ್‌ ಸಾವಿಕೇರಿ ಎಂಬಾತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಒಳರೋಗಿಯಾಗಿ ದಾಖಲಾಗಿದ್ದು, ಚಿಕಿತ್ಸೆ ಪೂರ್ಣಗೊಂಡ ಬಳಿಕ ಬಂಧಿಸಲಾಗುವುದು ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸೋಮವಾರ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ, ಆರೋಪಿಗಳನ್ನು ಎಡೆಮುರಿ ಕಟ್ಟಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT