ಬೆಂಗಳೂರು: ಐಎಎಸ್ ಅಧಿಕಾರಿಯಾಗಿದ್ದ ದಿವಂಗತ ಡಿ.ಕೆ. ರವಿ ಪತ್ನಿ ಕುಸುಮಾ ಅವರನ್ನು ಆರ್.ಆರ್. ನಗರ ಕ್ಷೇತ್ರದಿಂದ ಕಣಕ್ಕಿಳಿಸ ಬಯಸಿರುವ ಅವರ ತಂದೆ ಹನುಮಂತರಾಯಪ್ಪ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿ ಮಾತುಕತೆ ನಡೆಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಹನುಮಂತರಾಯಪ್ಪ ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಕುಸುಮಾ ಅವರು ಆರ್.ಆರ್. ನಗರ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಆದರೆ, ಜೆಡಿಎಸ್‌ನಿಂದ ಸ್ಪರ್ಧಿಸುತ್ತಾರೊ, ಕಾಂಗ್ರೆಸ್ ಅಭ್ಯರ್ಥಿ ಆಗುತ್ತಾರೊ ಎಂಬ ಕುತೂಹಲ ಮೂಡಿದೆ. ಮಗಳು ಜೆಡಿಎಸ್‌ನಿಂದ ಕಣಕ್ಕಿಳಿದರೆ ಬೆಂಬಲ ನೀಡುವಂತೆ ಕಾಂಗ್ರೆಸ್ ನಾಯಕರಲ್ಲಿ ಹನುಮಂತರಾಯಪ್ಪ ಮನವಿ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಜೊತೆಗೆ ಈ ವಿಷಯದ ಬಗ್ಗೆ ಚರ್ಚೆ ಮಾಡಿದ್ದಾರೆ. ಆದರೆ, ಅದಕ್ಕೆ ಸಹೋದರರಿಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಗೊತ್ತಾಗಿದೆ.

ಈ ಮಧ್ಯೆ, ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಗುರುವಾರ ಭೇಟಿ ನೀಡಿದ ಕುಸುಮಾ ಅವರು, ನಿರ್ಮಲಾನಂದನಾಥ ಶ್ರೀಗಳಿಂದ ಆಶೀರ್ವಾದ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.