ಹರಪನಹಳ್ಳಿ: ಮಾನವ ಬಂಧುತ್ವ ವೇದಿಕೆ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸುತ್ತಿರುವ ಸತೀಶ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಮತ್ತು ವಾಲ್ಮೀಕಿ ನಾಯಕ ಸಮಾಜಕ್ಕೆ ಕನಿಷ್ಠ 3 ಸಚಿವ ಸ್ಥಾನಗಳನ್ನು ಕಲ್ಪಿಸಬೇಕು ಎಂದು ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.

ಬುದ್ಧ, ಬಸವ, ಅಂಬೇಡ್ಕರ್ ತತ್ವಗಳನ್ನು ಸಿದ್ಧಾಂತವಾಗಿಸಿಕೊಂಡು ಮುನ್ನಡೆಯುತ್ತಿರುವ ಅಪರೂಪದ ರಾಜಕಾರಣಿ ಸತೀಶ ಜಾರಕಿಹೊಳಿ. 2006ರ ಹುಬ್ಬಳ್ಳಿ ಅಹಿಂದ ಸಮಾವೇಶದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಕಾರಣ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿದರು.

ನಾಯಕ ಸಮಾಜದ ಗೌರವಾಧ್ಯಕ್ಷ ಎಚ್.ಕೆ. ಹಾಲೇಶ, ಮಾಜಿ ಅಧ್ಯಕ್ಷ ಕೆ. ಉಚ್ಚೆಂಗೆಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಲಕ್ಕಳ್ಳಿ ಹನುಮಂತಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಯಡಿಹಳ್ಳಿ ಶೇಖರಪ್ಪ, ತಾ.ಪಂ. ಮಾಜಿ ಸದಸ್ಯ ವೈ. ಬಸಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ. ಆನಂದ ಅವರು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-25-1154404531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.