ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ಸಲ್ಲದು: ವಿಜಯೇಂದ್ರ

Published 19 ಮೇ 2024, 15:25 IST
Last Updated 19 ಮೇ 2024, 15:25 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸರ ಮೂಲಕ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡುವ ರಾಜ್ಯ ಸರ್ಕಾರದ ಪ್ರಯತ್ನವನ್ನು ಸಹಿಸಲಾಗದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

‘ಎಕ್ಸ್‌’ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್‌ ಅವರನ್ನು ಆಧಾರರಹಿತ ಆರೋಪದಡಿ ಬಂಧಿಸಲಾಗಿದೆ. ಇದನ್ನು ಖಂಡಿಸಿ ಸ್ಥಳೀಯ ಶಾಸಕ ಹರೀಶ್‌ ಪೂಂಜಾ ಅವರು ಠಾಣೆಯಲ್ಲೇ ಧರಣಿ ನಡೆಸಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್‌ ಇಂತಹ ಕೃತ್ಯ ಮಾಡಿಸುತ್ತಿದೆ ಎಂದು ದೂರಿದ್ದಾರೆ.

ಪೊಲೀಸರ ಮೂಲಕ ಬೆದರಿಸಿ ಕಾರ್ಯಕರ್ತರ ಹೋರಾಟದ ಶಕ್ತಿ ಕುಗ್ಗಿಸಲು ಹೊರಟಿದೆ. ಪೋಲಿಸರು ನ್ಯಾಯೋಚಿತವಾಗಿ ಕೆಲಸ ಮಾಡದಿದ್ದರೆ ಮುಂದಿನ ಪರಿಣಾಮಗಳ ಹೊಣೆ ಹೊರಲು ಸಿದ್ಧರಾಗಬೇಕು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT