ಹರಿಹರ: ಜಾತಿನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾಗಿದ್ದರಿಂದ ಜಾರಿಯಾಗಿದ್ದ ಬಂಧನ ವಾರಂಟ್ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅವರು ಗುರುವಾರ ಖುದ್ದಾಗಿ ಹಾಜರಾದರು.

ಶಾಸರಾಗಲೀ ಅಥವಾ ಅವರ ಪರ ವಕೀಲರಾಗಲೀ ಹಾಜರಾಗದ ಕಾರಣ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಸೋಮವಾರ ಶಾಸಕರ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದರು.

ಬೆಳಿಗ್ಗೆ ನ್ಯಾಯಾಲಯದ ಮುಂದೆ ಹರೀಶ್ ಹಾಗೂ ಅವರ ವಕೀಲರು ಹಾಜರಾಗಿ, ಹಿಂದಿನ ಮುದ್ದತ್ತಿಗೆ ಹಾಜರಾಗಲು ಆಗದಿರುವ ಬಗ್ಗೆ ನೀಡಿದ ಸಮಜಾಯಿಷಿಯನ್ನು ಪುರಸ್ಕರಿಸಿದ ನ್ಯಾಯಾಲಯ ₹1000 ದಂಡ ವಿಧಿಸಿ ವಾರಂಟ್ ಹಿಂಪಡೆಯಿತು.

ಮುಂದಿನ ವಿಚಾರಣೆಯನ್ನು ಮೇ 27ಕ್ಕೆ ನಿಗದಿಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-43-1403319159

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.