ಹರಿಹರ: ಪೌರಕಾರ್ಮಿಕರ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರಾದ ಹರಿಹರ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿ ಮಾಡಿದೆ.

ಬಿ.ಪಿ. ಹರೀಶ್ ಅವರಾಗಲೀ ಅಥವಾ ಅವರ ಪರ ವಕೀಲರಾಗಲೀ ಹಾಜರಾಗದ ಕಾರಣ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಸೋಮವಾರ ಶಾಸಕರ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿ, ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ನಿಗದಿ ಪಡಿಸಿದ್ದಾರೆ.

ಪ್ರಕರಣ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಬಿ.ಪಿ.ಹರೀಶ್ ಅವರನ್ನು ಅಭಿನಂದಿಸಲು 2023ರ ಮೇ 16ರಂದು ಹರಿಹರ ನಗರಸಭೆಯ ಪೌರಕಾರ್ಮಿಕರು ಹಾಗೂ ಮಾದಿಗ ಸಮಾಜದ ಮುಖಂಡರು ಬಂದಿದ್ದರು. ‘ಒಳಮೀಸಲಾತಿ ನೀಡಿದ್ದರೂ ನಿಮ್ಮ ಸಮಾಜದವರು ನಮ್ಮ ಪಕ್ಷಕ್ಕೆ ಬೆಂಬಲಿಸಿಲ್ಲ, ನಿಮಗೆ ಕೃತಜ್ಞತೆಯಿಲ್ಲ’ ಎಂದು ಶಾಸಕರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿತ್ತು.

ಅದೇ ದಿನ ಸಮಾಜದ ಮುಖಂಡರೊಂದಿಗೆ ರಾಜಿ ಮಾತುಕತೆ ನಡೆದು ಶಾಸಕರು ಕ್ಷಮೆ ಕೇಳಿದ್ದರಿಂದ ವಿವಾದ ತಣ್ಣಗಾಗಿತ್ತು. ಆದರೆ, ಮರುದಿನ ಅಭಿನಂದನಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ಹರೀಶ್, ‘ನಾನು ಆ ರೀತಿ ಹೇಳಿದ್ದು ನಿಜ ಮತ್ತು ಅದು ಸರಿಯಾಗಿಯೇ ಇದೆ’ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆಂದು ಆರೋಪಿಸಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಹನುಮಂತಪ್ಪ ಅವರು ಹರಿಹರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಈ ಪ್ರಕರಣವನ್ನು ದಾವಣಗೆರೆಯ ವಿಶೇಷ ಜಿಲ್ಲಾ ನ್ಯಾಯಾಲಯದಿಂದ ಬೆಂಗಳೂರಿ ನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶಿಸಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-43-955312065

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.