ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳಿಕೆ ನೀಡಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಆರ್ಎಸ್ಎಸ್ನವರು ಸಂವಿಧಾನ ಒಪ್ಪಿಲ್ಲ ಎಂಬುದು ಭಾಗವತ್ ಹೇಳಿಕೆಯಿಂದ ಗೊತ್ತಾಗುತ್ತಿದೆ. ಸಂವಿಧಾನ ಒಪ್ಪದವರನ್ನು ದೇಶದ್ರೋಹಿಗಳು ಎಂದು ನಾವು ಭಾವಿಸಬೇಕಾಗುತ್ತದೆ’ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ‘ಭಾಗವತ್ ಹೇಳಿಕೆ ಬಗ್ಗೆ ನಮ್ಮ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಆರ್ಎಸ್ಎಸ್ ಹಾಗೂ ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು. ಭಾಗವತ್ ಹೇಳಿಕೆ ಖಂಡನಾರ್ಹ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.