ಹಾಸನ: 108 ಆಂಬುಲೆನ್ಸ್ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಎಂಟಿ ಮತ್ತು ಪೈಲಟ್ ಸಿಬ್ಬಂದಿಯ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಮಾಜಿ ಸಂಘಟನಾ ಕಾರ್ಯದರ್ಶಿ ಯೋಗೀಶ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 108 ಆರೋಗ್ಯ ಕವಚ ಸೇವೆಯಡಿ ನೇಮಕ ಆಗಿರುವ ಸಿಬ್ಬಂದಿಗೆ ಕನಿಷ್ಠ ವೇತನ ದರದಲ್ಲಿ ಮೂಲ ವೇತನ, ಅನುಭವ ಬೋನಸ್ ಹಾಗೂ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನ ನೀಡುವ ಸರ್ಕಾರದ ಆದೇಶವನ್ನು ನೌಕರರು ಸ್ವಾಗತಿಸಿದ್ದಾರೆ. ಅದರಂತೆ ಕರ್ತವ್ಯ ನಿರ್ವಹಿಸಲು ಸಿದ್ಧರಾಗಿದ್ದಾರೆ ಎಂದು ತಿಳಿಸಿದರು.

ಆದರೆ, ಪ್ರಸ್ತುತ ಜಾರಿಯಲ್ಲಿರುವ ನಾಲ್ಕು ವಲಯವಾರು ಸೇವಾ ವ್ಯವಸ್ಥೆಯನ್ನು ಎರಡು ವಲಯಗಳಾಗಿ ಪರಿವರ್ತಿಸಿ, ವೇತನ ವ್ಯವಸ್ಥೆ ಸರಳಗೊಳಿಸಬೇಕು. 2008ರಿಂದ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯನ್ನು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಒಳಪಡಿಸದೇ ನೇರ ನೇಮಕಾತಿ ಮಾಡಬೇಕು ಎಂಬ ಆಗ್ರಹಿಸಿದರು.

ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅಪಘಾತ ಅಥವಾ ಪ್ರಾಣಾಪಾಯ ಸಂಭವಿಸಿದರೆ ಕನಿಷ್ಠ ₹50 ಲಕ್ಷ ಪರಿಹಾರಧನ ನೀಡಬೇಕು. ಸೇವಾ ಹಿರಿತನ ಕಳೆದುಕೊಂಡಿರುವ ನೌಕರರನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು. ಇತರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ತಮ್ಮ ಸ್ವಂತ ಜಿಲ್ಲೆಗಳಿಗೆ ವರ್ಗಾವಣೆ ಮಾಡಿಕೊಡಬೇಕು. 108 ಆಂಬುಲೆನ್ಸ್ ನೌಕರರ ಸಮಸ್ಯೆಗಳತ್ತ ಸರ್ಕಾರ ಶೀಘ್ರ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸುರೇಶ್, ನಟರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-36-176158955

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.