ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಹಠಾತ್ ಹೃದಯಾಘಾತಗಳಿಂದ ಇಪ್ಪತ್ತಕ್ಕೂ ಹೆಚ್ಚು ಅಮೂಲ್ಯ ಯುವ ಜೀವಗಳು ಬಲಿಯಾಗಿರುವುದು ಅತ್ಯಂತ ದುಃಖದ ವಿಷಯ ಮತ್ತು ಆತಂಕಕಾರಿ ಬೆಳವಣಿಗೆ. ಆದರೆ ಇದಕ್ಕಿಂತ ಹೆಚ್ಚು ಆತಂಕಕಾರಿ ಸಂಗತಿ ಎಂದರೆ, ಈ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ಮತ್ತು ಸಂವೇದನಾ ರಹಿತ ಸ್ಪಂದನೆ.
ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ…