ಬೆಂಗಳೂರು: ‘ಹಾಸನದಲ್ಲಿ ಡಿ. 5ರಂದು ನಡೆಯಲಿರುವ ಸಮಾವೇಶದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ವಹಿಸಿಕೊಳ್ಳಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಸಮಾವೇಶದ ಪೂರ್ವಭಾವಿಯಾಗಿ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಮೈಸೂರು ಭಾಗದ ಮುಖಂಡರ ಸಭೆ ಭಾನುವಾರ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾನತೆ, ಸಂವಿಧಾನದ ಬಗ್ಗೆ ಗೌರವ ಹೊಂದಿರುವವರು ಹಾಗೂ ಸ್ವಾಭಿಮಾನಿಗಳಿಗೆ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ನಾನು ಮತ್ತು ಕೆಪಿಸಿಸಿ ತಂಡದ ಸದಸ್ಯರು ಸಮಾವೇಶ ನಡೆಯುವ ಸ್ಥಳಕ್ಕೆ ಸದ್ಯದಲ್ಲಿ ಭೇಟಿ ನೀಡಿ ಸಿದ್ಧತೆಯನ್ನು ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡುತ್ತೇವೆ’ ಎಂದರು.

‘ಜನರ ಕಲ್ಯಾಣ, ಸಂವಿಧಾನ ರಕ್ಷಣೆ, ಸ್ವಾಭಿಮಾನ ರಕ್ಷಣೆ, ಸರ್ಕಾರದ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ. ಸರ್ಕಾರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಜನ ಈಗಾಗಲೇ ತೀರ್ಪು ಕೊಟ್ಟಿದ್ದಾರೆ. ಎಐಸಿಸಿ ನಾಯಕರ ನಿರ್ದೇಶನದಂತೆ ಮುಂದಿನ ಎರಡು ತಿಂಗಳು ಎಲ್ಲ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ’ ಎಂದರು.

‘ಕೆಲವು ಸಚಿವರು ಈ ಸಮಾವೇಶಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದು, ಸಮಾವೇಶದ ಸ್ವರೂಪ ಬದಲಾಗಿದ್ದು ಏಕೆ’ ಎಂಬ ಪ್ರಶ್ನೆಗೆ, ‘ಸಮಾವೇಶದ ಸ್ವರೂಪ ಎಲ್ಲಿ ನಿರ್ಧಾರ ಆಗಿತ್ತು? ಪಕ್ಷದ ಅಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯೇ ಹೊರತು ಮೈತ್ರಿ ಪಕ್ಷದ ಮುಖ್ಯಮಂತ್ರಿ ಅಲ್ಲ. ಇಲ್ಲಿ ಒಂದೇ ಪಕ್ಷ, ಒಂದೇ ಚಿಹ್ನೆ. ಕೆಲವರ ವೈಯಕ್ತಿಕ ಅಭಿಪ್ರಾಯವೇ ಬೇರೆ. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೇರಿ ಚರ್ಚೆ ಮಾಡಿದ್ದೇವೆ’ ಎಂದರು.

ಹಾಸನದಲ್ಲಿ ಸಮಾವೇಶ ಮಾಡುವಂತೆ ಪಕ್ಷದ ಅನೇಕ ನಾಯಕರು ಮುಖಂಡರು ತಿಳಿಸಿದ್ದಾರೆ. ಅನೇಕ ಸಂಘಟನೆಗಳು ಸಮುದಾಯಗಳು ಬೆಂಬಲ ಸೂಚಿಸಿವೆ. ಸಚಿವರು ಜಿಲ್ಲಾ ಉಸ್ತುವಾರಿ ಸಚಿವರು ಸಿದ್ಧತೆಯಲ್ಲಿ ತೊಡಗಿದ್ದಾರೆ.
ಡಿ.ಕೆ. ಶಿವಕುಮಾರ್, ಅಧ್ಯಕ್ಷ ಕೆಪಿಸಿಸಿ

ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರ ಜೊತೆ ಕೆಲವು ಸಚಿವರು ಪ್ರತ್ಯೇಕ ಸಭೆ ಮಾಡಿರುವ ಬಗ್ಗೆ ಕೇಳಿದಾಗ, ‘ಕೊನೆ ಗಳಿಗೆಯಲ್ಲಿ ಈ ಸಭೆ ನಿಗದಿಯಾಗಿದೆ. ನಮ್ಮ ಬಳಿ ಅನುಮತಿ ಪಡೆದು ಆ ನಾಯಕರು ಮೈಸೂರಿನಲ್ಲಿ ಸಭೆ ಮಾಡುತ್ತಿದ್ದಾರೆ. ಯಾರೂ ಪಕ್ಷಕ್ಕಿಂತ ದೊಡ್ಡವರಲ್ಲ. ಎಲ್ಲರಿಗಿಂತ ಪಕ್ಷ ದೊಡ್ಡದು ಎನ್ನುವುದು ಎಲ್ಲರಿಗೂ ಗೊತ್ತಿದೆ’ ಎಂದರು.

‘ಹೈಕಮಾಂಡ್ಗೆ ಹೋಗಿರುವ ಅನಾಮಧೇಯ ಪತ್ರ ಇಷ್ಟೆಲ್ಲ ಕೆಲಸ ಮಾಡಿದೆಯೇ’ ಎಂಬ ಪ್ರಶ್ನೆಗೆ, ‘ಎಐಸಿಸಿ ಅಧ್ಯಕ್ಷರಿಗೆ ಬರೆಯಲಾಗಿದೆ ಎಂಬ ಪತ್ರ ಯಾರ ಸೃಷ್ಟಿಯೊ ಗೊತ್ತಿಲ್ಲ. ಯಾರು ಕೂಡ ನನ್ನ ಬಳಿ ಈ ವಿಚಾರವಾಗಿ ಚರ್ಚೆ ಮಾಡಿಲ್ಲ’ ಎಂದು ತಿಳಿಸಿದರು.

‘ಪಕ್ಷ– ಸ್ವಾಭಿಮಾನ ಒಕ್ಕೂಟದ ಜಂಟಿ ಸಮಾವೇಶ’

ಬೆಂಗಳೂರು: ‘ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸಲು ಕಾಂಗ್ರೆಸ್ ಪಕ್ಷ ಹಾಗೂ ಸ್ವಾಭಿಮಾನಿಗಳ ಒಕ್ಕೂಟದ ಜಂಟಿ ಆಶ್ರಯದಲ್ಲಿ ಹಾಸನದಲ್ಲಿ ಸಮಾವೇಶ ನಡೆಸಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ಹಾಸನ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೂ ಆಹ್ವಾನಿಸಲಾಗಿದೆ. ಈ ಸಮಾವೇಶದಲ್ಲಿ ಪಕ್ಷವು ಸಕ್ರಿಯವಾಗಿ ಭಾಗವಹಿಸುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.