ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮೂದಾಗದ ಅತ್ಯಾಚಾರ ಕಲಂ: ಡಿಜಿಪಿಗೆ ದೂರು

Published 29 ಏಪ್ರಿಲ್ 2024, 23:30 IST
Last Updated 29 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಹಾಸನದ ಸಂಸದ ಹಾಗೂ ಹೊಳೆನರಸೀಪುರ ಶಾಸಕರ ವಿರುದ್ಧ ಸಂತ್ರಸ್ತ ಮಹಿಳೆ ದೂರು ನೀಡಿದರೂ, ಪೊಲೀಸರು ಅತ್ಯಾಚಾರ ಕಲಂನಡಿ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಪೊಲೀಸ್‌ ಮಹಾನಿರ್ದೇಶಕರಿಗೆ(ಡಿಜಿಐಜಿ) ಸೋಮವಾರ ದೂರು ಸಲ್ಲಿಸಿದ್ದಾರೆ.

47 ವರ್ಷದ ಸಂತ್ರಸ್ತ ಮಹಿಳೆ ಹೊಳೆನರಸೀಪುರ ಠಾಣೆಗೆ ದೂರು ನೀಡಿದ್ದಾರೆ. ದೂರು ಪಡೆದ ಪೊಲೀಸರು ಅತ್ಯಾಚಾರದ ಕಾಲಂನಡಿ ಪ್ರಕರಣ ದಾಖಲಿಸದೇ ಬೇರೆ ಕಲಂಗಳನ್ನು ನಮೂದಿಸಿದ್ದಾರೆ. ಪ್ರಭಾವಿ ರಾಜಕಾರಣಿಗಳ ಕುಟುಂಬದವರನ್ನು ರಕ್ಷಿಸಲು ಹೀಗೆ ಮಾಡಿರುವ ಶಂಕೆ ಇದೆ. ಆರೋಪಿ  ಚಿತ್ರೀಕರಿಸಿರುವ ನೂರಾರು ವಿಡಿಯೊಗಳಲ್ಲಿ ಅತ್ಯಾಚಾರ ನಡೆದಿರುವುದೂ ಸ್ಪಷ್ಟವಾಗಿದೆ‌. ಇವೆಲ್ಲವನ್ನೂ ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಜತೆಗೇ ವಿಚಾರಣೆ ನಡೆಸಬೇಕು ಎಂದು ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಮೀನಾಕ್ಷಿ ಬಾಳಿ, ಉಪಾಧ್ಯಕ್ಷೆ ಕೆ.ನೀಲಾ, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಸಬಿಹಾ ಭೂಮಿಗೌಡ, ಡಿವೈಎಫ್ಐ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಪ್ರಗತಿಪರ ಚಳವಳಿ ಮುಖಂಡರಾದ ನವೀನ್‌ ಸೂರಿಂಜೆ,  ಅಖಿಲಾ ವಿದ್ಯಾಸಂದ್ರ, ಜ್ಯೋತಿ ಅನಂತ ಸುಬ್ಬರಾವ್, ವಿನಯ್‌ ಶ್ರೀನಿವಾಸ್‌ ಮತ್ತಿತರರು ಒತ್ತಾಯಿಸಿದ್ದಾರೆ.

ಹೊಳೆನರಸೀಪುರದ ಇನ್‌ಸ್ಪೆಕ್ಟರ್‌ ಅಮಾನತು ಮಾಡಬೇಕು. ಸಂತ್ರಸ್ತ ಮಹಿಳೆಯರ ಹೇಳಿಕೆ ದಾಖಲಿಸಿಕೊಳ್ಳುವಾಗ ಮಹಿಳಾ ಆಪ್ತಸಮಾಲೋಚಕರು ಇರಬೇಕು. ಸೂಕ್ತ ಭದ್ರತೆ ಒದಗಿಸಬೇಕು. ವಿಡಿಯೊದಲ್ಲಿನ ಮಹಿಳೆಯರನ್ನು ಪೊಲೀಸರೇ ಪತ್ತೆ ಹಚ್ಚಿ ಹೇಳಿಕೆ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಂಧನಕ್ಕೆ ಆಗ್ರಹ: ಆರೋಪಿಗಳಾದ ಎಚ್‌.ಡಿ. ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು ಎಂದು ಭಾರತ ಮಹಿಳಾ  ರಾಷ್ಟ್ರೀಯ ಒಕ್ಕೂಟ (ಎನ್‌ಎಫ್‌ಐಡಬ್ಲ್ಯು) ಒತ್ತಾಯಿಸಿದೆ. 

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಮಗ್ರವಾಗಿ ತನಿಖೆ ನಡೆಸಬೇಕು. ಸಂತ್ರಸ್ತರಿಗೆ ನ್ಯಾಯ ದೊರಕಿಸಬೇಕು ಎಂದು ಸಂಘಟನೆಯ ಅಧ್ಯಕ್ಷೆ ಎ. ಜ್ಯೋತಿ, ಕಾರ್ಯದರ್ಶಿ ಕೆ. ರೇಣುಕಾ, ದಿವ್ಯಾ ಎಸ್‌. ಬಿರಾದಾರ ಒತ್ತಾಯಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT