ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್ ರೇವಣ್ಣ ಕೃತ್ಯ ನನ್ನ ಮನಸ್ಸನ್ನು ದಿಗ್ಭ್ರಮೆಗೊಳಿಸಿದೆ: ನಟ ಚೇತನ್‌

Published 29 ಏಪ್ರಿಲ್ 2024, 11:42 IST
Last Updated 29 ಏಪ್ರಿಲ್ 2024, 11:42 IST
ಅಕ್ಷರ ಗಾತ್ರ

ಬೆಂಗಳೂರು: ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಮತ್ತು ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ ಮತ್ತು ಅವರ ಮಗ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಗೃಹ ಇಲಾಖೆ ಆದೇಶ ಹೊರಡಿಸಿದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ವಿರುದ್ಧದ ಆರೋಪಗಳ ಕುರಿತು ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣ ಸಂಬಂಧ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಪ್ರತಿಕ್ರಿಯಿಸಿದ್ದಾರೆ.

‘ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳು ಗಂಭೀರವಾಗಿದ್ದು, ತಪ್ಪು ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅನ್ಯಾಯಕ್ಕೊಳಗಾದ ಮಹಿಳೆಯರು ತಮ್ಮ ಕಷ್ಟಗಳನ್ನು ವಿವರಿಸಲು ಧೈರ್ಯದಿಂದ ಮುಂದೆ ಬರುತ್ತಿರುವುದನ್ನು ನೋಡಿ ಸಂತೋಷವಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ‘ಸಾವಿರಾರು ನಿರ್ಭಯಾ’ಗಳಿಗೆ ಹೋಲಿಸಿದ್ದು, ಅದಕ್ಕೆ ಪ್ರಧಾನಿ ಮೋದಿ, ಬಿಜೆಪಿ ಹೊಣೆ ಹೊರಬೇಕೆಂದು ಒತ್ತಾಯಿಸುತ್ತಿರುವ ಕಾಂಗ್ರೆಸ್ ಪಕ್ಷದ ಮಹಿಳೆಯರ ನಡೆ ಹಾಸ್ಯಾಸ್ಪದವಾಗಿದೆ‘ ಎಂದು ಚೇತನ್ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಅಂಜಿಕೆ ಇಲ್ಲದಿರುವುದು ನನ್ನ ಮನಸ್ಸನ್ನು ದಿಗ್ಭ್ರಮೆಗೊಳಿಸಿದೆ. 2,900 ಚಿತ್ರಗಳು ಅಥವಾ ವಿಡಿಯೊಗಳನ್ನು ಒಳಗೊಂಡಿರುವ ಪೆನ್‌ಡ್ರೈವ್‌ ಅನ್ನು ಸಾರ್ವಜನಿಕಗೊಳಿಸಿದರೆ ಜೆಡಿಎಸ್‌ ಪಕ್ಷ ಹಾಗೂ ಕುಟುಂಬದವರು ಎದುರಿಸಬೇಕಾದ ಪರಿಣಾಮಗಳ ಬಗ್ಗೆ ಪ್ರಜ್ವಲ್‌ಗೆ ಯಾವುದೇ ಭಯವಿರಲಿಲ್ಲವೇ’ ಎಂದು ಚೇತನ್ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT