ಹಾಸನ: ‘ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೊ ಪೆನ್ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಎಸ್ಐಟಿ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ನ್ಯೂನತೆಗಳಿದ್ದು, ಅದನ್ನು ಸರಿಪಡಿಸದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಜೆಡಿಎಸ್ ಕಾನೂನು ಘಟಕದ ಮಾಜಿ ಉಪಾಧ್ಯಕ್ಷ ಎಂ.ಬಿ. ವಿಶ್ವನಾಥ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜೆಡಿಎಸ್ ಕಾನೂನು ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಪೂರ್ಣಚಂದ್ರ ಅವರು ಈ ಪ್ರಕರಣ ಸಂಬಂಧ ದೂರು ಸಲ್ಲಿಸಿದ್ದರು. 52 ಮಂದಿಯ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸದೇ, ಕೇವಲ 39 ಮಂದಿಯ ಹೆಸರನ್ನು ಚಾರ್ಜ್ಶೀಟ್ನಲ್ಲಿ ಸೇರಿಸಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.

‘ಎಫ್ಐಆರ್ ಸಲ್ಲಿಸಿದ ನಂತರ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿಲ್ಲ. ಸಿ.ಆರ್. ಶಂಕರ್ ಅವರು ಪೆನ್ಡ್ರೈವ್ ಹಂಚುತ್ತಿದ್ದವರನ್ನು ಕಣ್ಣಾರೆ ಕಂಡಿದ್ದರೂ ಅವರನ್ನು ವಿಚಾರಣೆ ನಡೆಸಿಲ್ಲ’ ಎಂದು ಆರೋಪಿಸಿದರು.

‘ಪೆನ್ಡ್ರೈವ್ ಮೂಲ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹಂಚಿದವರು ಯಾರು? ಇದಕ್ಕೆ ಪ್ರೇರಣೆ ನೀಡಿದವರು ಯಾರು ಎಂಬುದನ್ನು ತನಿಖೆ ಮಾಡದೇ, ಕೇವಲ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಗುರಿಯಾಗಿಸಿ, ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಈ ಮೂಲಕ ಜೆಡಿಎಸ್ ನಾಯಕರು ಪ್ರಶ್ನಿಸದಂತೆ ಮಾಡುವುದೇ ಇವರ ಉದ್ದೇಶವಾಗಿದೆ’ ಎಂದು ದೂರಿದರು.

‘ಈ ಪ್ರಕರಣದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸದೇ ಸರ್ಕಾರ ಲೋಪ ಎಸಗಿದೆ. ಪೂರ್ಣಚಂದ್ರ ಅವರು ನೀಡಿದ ದೂರಿನಲ್ಲಿ ನವೀನ್, ಕ್ವಾಲಿಟಿ ಬಾರ್ ಶರತ್ ಹಾಗೂ ಸಂಸದ ಶ್ರೇಯಸ್ ಪಟೇಲ್ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು. ಆದರೆ ಚಾರ್ಜ್ಶೀಟ್ನಲ್ಲಿ ಇವರ ಹೆಸರನ್ನು ಕೈ ಬಿಡಲಾಗಿದೆ’ ಎಂದರು.

‘ಎಸ್ಐಟಿ ತನಿಖೆ, ಚಾರ್ಜ್ಶೀಟ್ಗಳೆಲ್ಲ ರಾಜಕೀಯ ಪ್ರೇರಿತವಾಗಿದ್ದು, ನಾನಾ ದೋಷಗಳು ಕಾಣುತ್ತಿವೆ. ಇದನ್ನು ನಾವು ಒಪ್ಪುವುದಿಲ್ಲ. ಪಾರದರ್ಶಕ ತನಿಖೆ ಹಾಗೂ ಕೈ ಬಿಟ್ಟಿರುವ ಹೆಸರು ಸೇರಿಸುವವರೆಗೂ ಕಾನೂನು ಹೋರಾಟ ನಡೆಸಲಾಗುವುದು. 15 ದಿನದಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೆ ರಾಜ್ಯದಾದ್ಯಂತ ಜೆಡಿಎಸ್ ಕಾನೂನು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಶೇಷಾದ್ರಿ, ಧರಣಿ, ನಯನಾ, ಲೋಕೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-36-1469601979

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.