ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರಿನತ್ತ ಪ್ರಜ್ವಲ್: ರಾತ್ರಿ 12.40ಕ್ಕೆ ವಿಮಾನ ನಿಲ್ದಾಣ ತಲುಪುವ ಸಾಧ್ಯತೆ

Published 30 ಮೇ 2024, 11:41 IST
Last Updated 30 ಮೇ 2024, 11:41 IST
ಅಕ್ಷರ ಗಾತ್ರ

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮೂನಿಕ್ ನಗರದಿಂದ ಬೆಂಗಳೂರಿನತ್ತ ಹೊರಟಿದ್ದು, ಗುರುವಾರ ರಾತ್ರಿ 12.40 ಗಂಟೆ ಸುಮಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪುವ ಸಾಧ್ಯತೆ ಇದೆ.

ಏರ್ ಲುಫ್ತಾನ್ಸ್ ವಿಮಾನದಲ್ಲಿ (ಎಲ್‌ಎಚ್‌ 764) ಪ್ರಜ್ವಲ್ ರೇವಣ್ಣ ಇರುವ ಮಾಹಿತಿ ಎಸ್‌ಐಟಿಗೆ ಲಭ್ಯವಾಗಿದೆ. ರಾತ್ರಿ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿಗೆ ಬರುತ್ತಿದ್ದಂತೆ ವಶಕ್ಕೆ ಪಡೆಯಲು ಅಧಿಕಾರಿಗಳು ಸಿದ್ಧರಾಗಿದ್ದಾರೆ.

‘ಮೂನಿಕ್‌ ವಿಮಾನ ನಿಲ್ದಾಣದಿಂದ ಹೊರಟಿರುವ ವಿಮಾನ, ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ 2ಕ್ಕೆ ಬಂದಿಳಿಯಲಿದೆ. ಹೀಗಾಗಿ, ನಿಲ್ದಾಣದಲ್ಲಿಯೇ ಅಧಿಕಾರಿಗಳ ತಂಡ ಬೀಡು ಬಿಟ್ಟಿದೆ. ನಿಲ್ದಾಣದ ವಲಸೆ ಅಧಿಕಾರಿಗಳ ಸಹಾಯದಿಂದ ಪ್ರಜ್ವಲ್ ಅವರನ್ನು ವಶಕ್ಕೆ ಪಡೆಯಲಾಗುವುದು’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ಬಿಗಿ ಭದ್ರತೆ: ವಿಮಾನ ನಿಲ್ದಾಣ ಹಾಗೂ ಪ್ರಜ್ವಲ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಕರೆದೊಯ್ಯಲಿವು ಬಳ್ಳಾರಿ ರಸ್ತೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಅವರ ಮನವಿ ಮೇರೆಗೆ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರು ಭದ್ರತೆಗೆ ಸಂಬಂಧಪಟ್ಟಂತೆ ಪೊಲೀಸರಿಗೆ ಕೆಲ ಸೂಚನೆಗಳನ್ನು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT