ಹಾಸನ: 12ನೇ ಶತಮಾನದ ಬಸವಾದಿ ಶರಣರ ವಚನಗಳು ಕನ್ನಡ ಸಾಹಿತ್ಯದ ವಿಶಿಷ್ಟ ಹಾಗೂ ಅನುಭಾವಪೂರ್ಣ ಕಾವ್ಯ ಪ್ರಕಾರವಾಗಿದ್ದು, ಅವುಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಮಠಗಳ ಮೇಲಿದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ನಗರದ ತಣ್ಣೀರುಹಳ್ಳ ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜನ್ಮದಿನ, ಶಿವಲಿಂಗ ಸ್ವಾಮೀಜಿ 92ನೇ ಜಯಂತ್ಯುತ್ಸವ, ದಾಸೋಹ ಭವನ ಉದ್ಘಾಟನೆ ಹಾಗೂ ವಿಜಯಕುಮಾರ ಸ್ವಾಮೀಜಿ 56ನೇ ಪಟ್ಟಾಧಿಕಾರ ಮಹೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಅವರು ಮಾತನಾಡಿದರು.

ವಚನ ಸಾಹಿತ್ಯವು ಸಮಾನತೆ, ಕಾಯಕ ತತ್ವ, ಜಾತಿ-ಲಿಂಗ ಭೇದ ನಿರ್ಮೂಲನೆ ಮತ್ತು ಶುದ್ಧ ಭಕ್ತಿಯನ್ನು ಪ್ರತಿಪಾದಿಸುವ ಮಹತ್ವದ ಪರಂಪರೆಯಾಗಿದೆ. ಸಾಮಾನ್ಯ ಜನರೂ ಅರ್ಥ ಮಾಡಿಕೊಳ್ಳುವ ಸರಳ ಭಾಷೆಯಲ್ಲಿ ರಚಿತವಾಗಿರುವ ವಚನಗಳು, ಸಮಾಜದಲ್ಲಿ ಅಂತರಂಗ ಶುದ್ಧಿ ಮತ್ತು ಸಾಮಾಜಿಕ ಪರಿವರ್ತನೆಗೆ ದಾರಿ ತೋರಿಸುತ್ತವೆ. ಈ ಹಿನ್ನೆಲೆಯಲ್ಲಿ ಮಠಗಳು ತಮ್ಮ ತ್ರಿವಿಧ ದಾಸೋಹ ಕಾರ್ಯಗಳ ಜೊತೆಗೆ ವಚನ ಸಾಹಿತ್ಯದ ಸಂರಕ್ಷಣೆ ಹಾಗೂ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.

ತಣ್ಣೀರುಹಳ್ಳ ಮಠದ ಅಭಿವೃದ್ಧಿಗೆ ವಿಜಯಕುಮಾರ ಸ್ವಾಮೀಜಿ ಅಲ್ಪಾವಧಿಯಲ್ಲಿ ನೀಡಿದ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶಿವಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಮಠಗಳು ಧಾರ್ಮಿಕ ಕೇಂದ್ರಗಳಷ್ಟೇ ಅಲ್ಲದೇ ಅಕ್ಷರ, ವಸ್ತ್ರ ಮತ್ತು ವಸತಿ ನೀಡುವ ತ್ರಿವಿಧ ದಾಸೋಹದ ಕೇಂದ್ರಗಳಾಗಬೇಕು. ಶಿಕ್ಷಣದೊಂದಿಗೆ ಸಂಸ್ಕಾರ ನೀಡಿದಾಗ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ನಡೆಸಿದ ಶಿಕ್ಷಣ ಕ್ರಾಂತಿ ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

ಪುಷ್ಪಗಿರಿ ಮಠದ ಪೂಜ್ಯ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇಂದಿನ ಯುಗದಲ್ಲಿ ಮನುಷ್ಯ ಹಣ ಮತ್ತು ಅಧಿಕಾರದ ಹಿಂದೆ ಓಡುತ್ತಾ ಆರೋಗ್ಯವನ್ನು ನಿರ್ಲಕ್ಷಿಸುತ್ತಿದ್ದಾನೆ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಆರೋಗ್ಯಕರ ಹಾಗೂ ಮೌಲ್ಯಾಧಾರಿತ ಜೀವನಕ್ಕೆ ದಾರಿ ತೋರಿಸುತ್ತವೆ. ಆದರೆ ಕೆಲವರು ಆಶೀರ್ವಚನಕ್ಕಿಂತ ಊಟಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವುದು ವಿಷಾದನೀಯ ಎಂದರು.

ವಿರಾಜಪೇಟೆಯ ಅರಮೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ತಣ್ಣೀರುಹಳ್ಳ ಮಠವು 18ನೇ ಶತಮಾನದಿಂದಲೇ ಧಾರ್ಮಿಕ, ಶೈಕ್ಷಣಿಕ ಹಾಗೂ ದಾಸೋಹ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡುತ್ತಿದೆ. ಹಿಂದಿನ ಸ್ವಾಮೀಜಿ ಹಾಸನದಲ್ಲಿ ಸಿದ್ದೇಶ್ವರ ಐಟಿಐ ಸ್ಥಾಪಿಸಿ ಯುವಕರಿಗೆ ವೃತ್ತಿಪರ ಶಿಕ್ಷಣಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದರು.

ಸಂಸದ ಶ್ರೇಯಸ್ ಎಂ. ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ಮಾಜಿ ಶಾಸಕರಾದ ಕೆ.ಎಸ್. ಲಿಂಗೇಶ್ ಮತ್ತು ಗುರುದೇವ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ ನಾಗೇಂದ್ರ, ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ನವಿಲೆ ಪರಮೇಶ್, ಉದ್ಯಮಿ ಗ್ರಾನೈಟ್ ರಾಜಶೇಖರ, ವೀರಶೈವ ಲಿಂಗಾಯತ ಜಿಲ್ಲಾ ಘಟಕದ ಅಧ್ಯಕ್ಷ ಐಸಾಮಿಗೌಡ, ಕಟ್ಟಾಯ ಶಿವಕುಮಾರ್ ಸೇರಿ ವಿವಿಧ ಮಠಗಳ ಸ್ವಾಮೀಜಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-36-1752432419

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.