ಹಾವೇರಿ: ‘ಪಂಚರಾಜ್ಯಗಳ ಚುನಾವಣೆ ಹಾಗೂ ಬಾಗಲಕೋಟೆ–ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳು ಮುಗಿದಿವೆ. ಇದೇ ಮೇನಲ್ಲಿಯೇ ರಾಜ್ಯ ಸರ್ಕಾರದ ಸಂಪುಟ ಪುನರ್ ರಚನೆ ಆಗಬಹುದು’ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ಸಂಪುಟ ಪುನರ್ ರಚನೆ ಬಗ್ಗೆ ತೀರ್ಮಾನ ಮಾಡಲಿದ್ದಾರೆ’ ಎಂದರು.

‘ಪಕ್ಷದ ಪ್ರಮುಖ ನಾಯಕರು, ಚುನಾವಣೆಗಳಲ್ಲಿ ನಿರತರಾಗಿದ್ದರು. ಈಗ ಎಲ್ಲ ಚುನಾವಣೆ ಮುಗಿದಿದೆ. ಹೀಗಾಗಿ, ಆದಷ್ಟು ಬೇಗ ಸಚಿವ ಸಂಪುಟ ಪುನರ್ ರಚನೆ ಆಗಲಿದೆ’ ಎಂದು ಹೇಳಿದರು.

2028ಕ್ಕೆ ದಿಕ್ಸೂಚಿ: ‘ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಎರಡೂ ಕಡೆ ಜನರು ನಮಗೆ ಅಭೂತಪೂರ್ವ ಆಶೀರ್ವಾದ ಮಾಡಿದ್ದು, ಇದು ಮುಂಬ ರುವ 2028ರ ಚುನಾವಣೆಯ ದಿಕ್ಸೂಚಿ. ಮತ್ತೆ ನಮ್ಮ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಗ್ಯಾರಂಟಿ ಯೋಜನೆಗಳೇ, ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಿವೆ’ ಎಂದು ಸಲೀಂ ಅಹ್ಮದ್ ಹೇಳಿದರು.

ರಾಜ್ಯಪಾಲರಿಂದ ರಾಜಕಾರಣ: ‘ತಮಿಳುನಾಡಿನಲ್ಲಿ ರಾಜ್ಯಪಾಲರು, ರಾಜಕಾರಣ ಮಾಡಿ ಅತಂತ್ರ ಮಾಡಿದ್ದಾರೆ. ದೊಡ್ಡ ಪಕ್ಷವನ್ನು ಕರೆದು ಬಹುಮತ ಸಾಬೀತಿಗೆ ಅವಕಾಶ ಕೊಡಬೇಕಿತ್ತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.