ಹಾವೇರಿ: ‘ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿರುವ ಚೆಕ್ಪೋಸ್ಟ್ಗಳಲ್ಲಿ ರೈತರಿಗೆ ಮುಕ್ತ ಪ್ರವೇಶ ನೀಡಬೇಕು. ಯಾವುದೇ ಗ್ರೀನ್ ಪಾಸ್ ಅವಶ್ಯವಿಲ್ಲ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.

ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಉಳುಮೆ, ಬಿತ್ತನೆ, ಕೊಯ್ಲು, ಕೊಳವೆಬಾವಿ ಕೊರೆಸುವುದು ಸಂಬಂಧಿಸಿದಂತೆ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ಜೊತೆಗೆ ಕೃಷಿ ಪರಿಕರಗಳನ್ನು ಮಾರುವ ಅಂಗಡಿಗಳಿಗೆ ಯಾವುದೇ ಸಮಯದ ನಿರ್ಬಂಧವಿಲ್ಲ. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಮಾರಾಟ ಮಾಡಬಹುದು. ರೈತರಿಗೆ ಅಗತ್ಯವಿದ್ದಷ್ಟು ಪೆಟ್ರೋಲ್, ಡೀಸೆಲ್ ನೀಡಬೇಕು ಎಂದು ಹೇಳಿದರು.

ಕಳಪೆ ಬಿತ್ತನೆ ಬೀಜ ಮಾರಿದರೆ ಕ್ರಮ

ಕೃಷಿ ಚಟುವಟಿಕೆಗೆ ಬೇಕಾದ ಬಿತ್ತನೆ ಬೀಜ, ಗೊಬ್ಬರದ ದಾಸ್ತಾನು ಸಾಕಷ್ಟು ಇದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ. ಮಾರ್ಚ್ 10ರಿಂದ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುವುದು. ಕಳಪೆ ಬಿತ್ತನೆ ಬೀಜ ಮಾರಾಟ ಮಾಡಿದರೆ, ಅಂಥವರ ವಿರುದ್ಧ ಕೃಷಿ ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಪರವಾನಗಿ ರದ್ದು ಮಾಡಿ, ಅಂಥವರನ್ನು ಜೈಲಿಗೆ ಕಳಿಸಬೇಕು. ಕಳಪೆ ಬಿತ್ತನೆ ಬೀಜ ಮಾರಾಟ ಮಾಡಿದರೆ ರೈತನನ್ನು ಕೊಂದಂತೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.