ಹಾವೇರಿ: ಅತೀ ವೇಗದ ಚಾಲನೆ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಯಿಂದ ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರಸಕ್ತ ವರ್ಷದ ಮೂರು ತಿಂಗಳಲ್ಲಿ 11,265 ಅಪಘಾತಗಳು ಸಂಭವಿಸಿ 2,917 ಮಂದಿ ಮೃತಪಟ್ಟಿದ್ದಾರೆ. ದಿನಕ್ಕೆ ಸರಾಸರಿ 32 ಮಂದಿ ಜೀವ ಕಳೆದುಕೊಂಡಿದ್ದಾರೆ.

ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳು ಅಲ್ಲದೇ ಇತರೆ ರಸ್ತೆಗಳಲ್ಲಿ 2026ರ ಜನವರಿಯಿಂದ ಮಾರ್ಚ್ವರೆಗೆ ಸಂಭವಿಸಿದ ಅಪಘಾತಗಳ ಅಂಕಿ–ಅಂಶಗಳನ್ನು ರಾಜ್ಯ ಅಪರಾಧ ದಾಖಲೆಗಳ ಬ್ಯೂರೊ (ಎಸ್ಸಿಆರ್ಬಿ) ಬಿಡುಗಡೆಗೊಳಿಸಿದೆ.

‘ಅಪಘಾತಗಳು ಸಂಭವಿಸುವ ಬ್ಲಾಕ್ ಸ್ಟಾಟ್ಗಳನ್ನು ಗುರುತಿಸಿ, ಅಂಥ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಕೋರಿ ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದಿದೆ.

ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭವಾದ ಜನವರಿ ತಿಂಗಳಿನಲ್ಲಿ 3,875 ಅಪಘಾತಗಳು ಸಂಭವಿಸಿದ್ದು, 1,024 ಮಂದಿ ಮೃತಪಟ್ಟಿದ್ದಾರೆ. 4,842 ಮಂದಿ ಗಾಯಗೊಂಡಿದ್ದಾರೆ. ಫೆಬ್ರುವರಿ ಮತ್ತು ಮಾರ್ಚ್ಗೆ ಹೋಲಿಸಿದರೆ, ಜನವರಿಯಲ್ಲಿಯೇ ಅತೀ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು, ಹುಬ್ಬಳ್ಳಿ, ಮೈಸೂರು ಹಾಗೂ ಮಂಗಳೂರು ನಗರಗಳನ್ನು ಸಂಪರ್ಕಿಸಲು ರಾಷ್ಟ್ರೀಯ ಹೆದ್ದಾರಿಗಳಿವೆ. ಹಾವೇರಿ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ 7,300 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದಾಗಿ ಲೋಕೋಪಯೋಗಿ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ಹೆದ್ದಾರಿ (27,880 ಕಿ.ಮೀ.) ಹಾಗೂ ಇತರೆ ರಸ್ತೆಗಳಿಗಿಂತಲೂ, ರಾಷ್ಟ್ರೀಯ ಹೆದ್ದಾರಿಗಳಲ್ಲಿಯೇ ಅತೀ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಜೊತೆಗೆ, ಹೆಚ್ಚಿನ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

‘ರಾಷ್ಟ್ರೀಯ ಹೆದ್ದಾರಿಗಳಲ್ಲಿಯೇ ಮೂರು ತಿಂಗಳ ಅವಧಿಯಲ್ಲಿ 3,549 ಅಪಘಾತಗಳು ಸಂಭವಿಸಿವೆ. ಇದರಲ್ಲಿ 970 ಮಂದಿ ಮೃತಪಟ್ಟಿದ್ದು, 4,727 ಮಂದಿ ಗಾಯಗೊಂಡಿದ್ದಾರೆ. ಕೆಲವರು ಶಾಶ್ವತ ಅಂಗವಿಕಲರಾಗಿದ್ದಾರೆ. ಹಲವರು, ಇಂದಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿರುವ ಕೆಲವರು, ಕೋಮಾ ಸ್ಥಿತಿಯಲ್ಲಿ ಸಾವು–ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ’ ಎಂದು ಎಸ್ಸಿಆರ್ಬಿ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.