ಹಾವೇರಿ: ‘ರಾಜ್ಯ ಸರ್ಕಾರವು ಕನಿಷ್ಠ ವೇತನವನ್ನು ಪರಿಷ್ಕರಣೆ ಮಾಡಬೇಕು. ಇಂದಿನ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚಕ್ಕೆ ಅನುಗುಣವಾಗಿ ಎಲ್ಲ ಕಾರ್ಮಿಕರಿಗೆ ಸರಾಸರಿ ₹36,000 ಕನಿಷ್ಠ ವೇತನ ನಿಗದಿಪಡಿಸಬೇಕು’ ಎಂದು ಆಗ್ರಹಿಸಿ ಕಾರ್ಮಿಕರು ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ಕಾರ್ಮಿಕರು, ತಮ್ಮ ಬೇಡಿಕೆ ಈಡೇರಿಕೆಗಾಗಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. ಸೆಂಟರ್ ಆಪ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಗ್ರಾಮ ಪಂಚಾಯತಿ ನೌಕರರು, ಸ್ವಚ್ಛವಾಹಿನಿ ಸಿಬ್ಬಂದಿ ಹಾಗೂ ಕಟ್ಟಡ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

‘ಕಾರ್ಮಿಕರ ನಿರಂತರ ಹೋರಾಟದ ಫಲವಾಗಿ ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಮೇ 22ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಂತಿಮ ಕನಿಷ್ಠ ವೇತನ ಅಧಿಸೂಚನೆ ಸ್ವಾಗತಾರ್ಹವಾಗಿದೆ. ಬೆಲೆ ಏರಿಕೆ ಸೇರಿದಂತೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಲಕ್ಷಾಂತರ ಕಾರ್ಮಿಕರಿಗೆ ಸಹಾಯವಾಗಲಿದೆ. ಆದರೆ, ಸದರಿ ಕನಿಷ್ಠ ವೇತನ ಅಧಿಸೂಚನೆಯಿಂದ ಹೊರಗಿಟ್ಟಿರುವ ಬಹುತೇಕ ಲಕ್ಷಾಂತರ ಬಡ ಮಹಿಳೆಯರಿರುವ ಗಾರ್ಮೆಂಟ್ಸ್, ಪ್ಲಾಂಟೇಷನ್, ಬೀಡಿ, ಕೈಮಗ್ಗ ಮುಂತಾದ 19 ಉದ್ದಿಮೆಗಳಲ್ಲಿಯ ಕಾರ್ಮಿಕರಿಗೆ ಅನ್ಯಾಯವಾಗಲಿದೆ. ಈ ಉದ್ದಿಮೆಗಳಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿ ಮಾಡಿ ಅಧಿಸೂಚನೆ ಹೊರಡಿಸಬೇಕು’ ಎಂದು ಕಾರ್ಮಿಕರು ಆಗ್ರಹಿಸಿದರು.

‘ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರ, ಲೋಡಿಂಗ್ ಅನ್ ಲೋಡಿಂಗ್ (ಹಮಾಲಿ) ಸೇರಿದಂತೆ ತುಂಡು ಕೆಲಸ (ಪೀಸ್ ವರ್ಕ್) ಸ್ವರೂಪದ ಶ್ರಮಿಕ ಪ್ರಾಧಾನ್ಯ ಉದ್ದಿಮೆಗಳಿಗೆ ವೇತನ ಪರಿಷ್ಕರಣೆ ಮಾಡಲಾಗುವುದೆಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಅದಕ್ಕೆ ಯಾವುದೇ ಕಾಲಮಿತಿ ನಿಗದಿ ಮಾಡಿಲ್ಲ. ಕೂಡಲೇ ಪರಿಷ್ಕೃತ ಕನಿಷ್ಠ ವೇತನ ನಿಗದಿ ಮಾಡಬೇಕು. ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ಸ್ಕೀಂ ನೌಕರರನ್ನು ಕನಿಷ್ಟ ವೇತನ ವ್ಯಾಪ್ತಿಗೆ ತರಬೇಕು’ ಎಂದು ಆಗ್ರಹಿಸಿದರು.

‘2025 ಏಪ್ರಿಲ್ 11ರಿಂದಲೇ ಕನಿಷ್ಠ ವೇತನ ಜಾರಿಗೆ ತರಬೇಕು. ಒಂದು ವರ್ಷದ ಅರಿಯರ್ಸ್ ಕಾರ್ಮಿಕರಿಗೆ ನೀಡಬೇಕು. ಮಾಲೀಕರ ಯಾವುದೇ ಒತ್ತಡಕ್ಕೆ ಮಣಿಯದೆ ಈ ಪರಿಷ್ಕೃತ ಕನಿಷ್ಠ ವೇತನದ ಆದೇಶವನ್ನು ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು’ ಎಂದು ಕಾರ್ಮಿಕರು ಒತ್ತಾಯಿಸಿದರು.

‘ಕಾರ್ಮಿಕ ಸಂಹಿತೆಗಳಿಗೆ ರಾಜ್ಯ ಸರ್ಕಾರವು ತಿದ್ದುಪಡಿಗಳನ್ನು ತಂದು ನಂತರ ನಿಯಮಗಳನ್ನು ರೂಪಿಸಬೇಕು. ಕಾಯಂಯೇತರ ಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಲು ಅಗತ್ಯ ಕಾನೂನು ರೂಪಿಸಬೇಕು. ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ಮನವಿ ಸಲ್ಲಿಕೆ: ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ ಅಮೃತಗೌಡ ಪಾಟೀಲ, ಜಿ.ಪಂ. ಯೋಜನಾ ನಿರ್ದೇಶಕರಾದ ರೇಖಾ ಡೊಳ್ಳಿನ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಕಾರ್ಮಿಕರು ಮನವಿ ಸಲ್ಲಿಸಿದರು.

ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಜಿಲ್ಲಾ ಸಂಚಾಲಕ ಅಂದಾನೆಪ್ಪ ಕೆ. ಹೆಬಸೂರು, ಗ್ರಾ.ಪಂ. ನೌಕರ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಕೋಟಿ, ಮುಖಂಡರಾದ ಫಕ್ಕಿರೇಶ ಹಕ್ಕಿಮರೆಣ್ಣನವರ, ಮಂಜು ರಟ್ಟೀಹಳ್ಳಿ, ಆಂಜನೇಯ ನಾಗಣ್ಣನವರ, ಚನ್ನವೀರಯ್ಯ ಹಿರೇಮಠ, ರಿಯಾಜ್ ಅಹಮ್ಮದ್ ಮರಫಾಜಿ, ರಿಯಾಜ್ ಕೋಟೇನವರ, ಸಾಬೀರ ಕಡಕೋಳ, ಗಾಯತ್ರಿ ಬಲ್ಮುರಿ, ಮಮತಾ ಆನವಟ್ಟಿ, ಲತಾ ಯಲಗಚ್ಚ, ದೀಪಾ ಶಿರಗಂಬಿ, ಶೋಭಾ ಬೂದಗಟ್ಟಿ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-22-1746493007

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.