ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ದಾಖಲೆ ಇಲ್ಲದ ₹ 24 ಲಕ್ಷ ನಗದು ವಶ

Last Updated 18 ಮೇ 2019, 8:50 IST
ಅಕ್ಷರ ಗಾತ್ರ

ಮಂಗಳೂರು: ಹವಾಲಾ ಹಣ ಸಾಗಾಟದ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಇಲ್ಲಿನ ರಥಬೀದಿಯಲ್ಲಿ ಶನಿವಾರ ಬೆಳಿಗ್ಗೆ ಒಬ್ಬನನ್ನು ಬಂಧಿಸಿ ₹ 24 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ ನಿವಾಸಿ ಮಂಜುನಾಥ್ (51) ಬಂಧಿತ ಆರೋಪಿ. ಮಂಗಳೂರು ಉತ್ತರ (ಬಂದರು) ಠಾಣೆ ಪೊಲೀಸರು ಶನಿವಾರ ಬೆಳಿಗ್ಗೆ ಗಸ್ತು ತಿರುಗುತ್ತಿದ್ದರು. ಆಗ ರಥಬೀದಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ನಡೆದು ಹೋಗುತ್ತಿದ್ಧ ಈತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಹಣ ಪತ್ತೆಯಾಗಿದೆಹಣದ ಮೂಲ ಮತ್ತು ಯಾರಿಗೆ ತಲುಪಿಸಲು ಹೊರಟಿದ್ದ ಎಂಬುದರ ಕುರಿತು ಆರೋಪಿ ಯಾವುದೇ ಮಾಹಿತಿ ನೀಡುತ್ತಿಲ್ಲ. ದಾಖಲೆಗಳನ್ನೂ ಒದಗಿಸಿಲ್ಲ. ಆತನನ್ನು ಬಂಧಿಸಿ, ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಬೆಂಗಳೂರಿನ ಮಲ್ಲೇಶ್ವರದ ಮಂಜುನಾಥ್ ಎಂಬುವವನನ್ನು ಬಂಧಿಸಿದ್ದ ಪೊಲೀಸರು ₹ 1 ಕೋಟಿ ನಗದು ವಶಪಡಿಸಿಕೊಂಡಿದ್ದರು. ಈ ಸಂಬಂಧ ನಗರದ ಚಿನ್ನಾಭರಣ ವ್ಯಾಪಾರಿ ರಾಜು ಪವಾರ್ ಎಂಬಾತನ ಮನೆ, ಕಚೇರಿಗಳ ಮೇಲೆ ಶುಕ್ರವಾರ ರಾತ್ರಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT