ಬೆಂಗಳೂರು: ಚಾಮರಾಜನಗರ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ 24 ಜನರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.

ಪರಿಹಾರ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಶೇಷ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿದರು. ‘ಆದಷ್ಟು ಬೇಗ ಪರಿಹಾರವನ್ನು ಮೃತರ ಕುಟುಂಬದವರಿಗೆ ತಲುಪಿಸಬೇಕು’ ಎಂದು ಪೀಠ ತಿಳಿಸಿತು.

‘ಮೃತಪಟ್ಟವರು 24 ಜನರಷ್ಟೆಯೇ ಎಂಬುದನ್ನೂ ಪರಿಶೀಲಿಸುವ ಅಗತ್ಯವಿದೆ. ಕಾನೂನು ಸೇವೆಗಳ ಪ್ರಾಧಿಕಾರದ(ಕೆಎಸ್‌ಎಲ್‌ಎಸ್‌ಎ) ಮೂವರು ಸದಸ್ಯರ ಸಮಿತಿಯು ಮೇ 4ರಿಂದ ಮೇ 10ರ ನಡುವೆ 36 ರೋಗಿಗಳು ಆಮ್ಲಜನಕ ಕೊರತೆಯಿಂದ ಮೃತಪಟ್ಟಿರಬಹುದು ಎಂದು ಶಂಕಿಸಿದೆ’ ಎಂದು ಪೀಠ ಹೇಳಿದೆ.

ಮೇ 17 ಮತ್ತು 18ರಂದು ದಿನಕ್ಕೆ 1,015 ಟನ್‌ಗೂ ಕಡಿಮೆ ಆಮ್ಲಜನಕ ಸಂಗ್ರಹ ಇತ್ತು ಎಂದು ಸರ್ಕಾರ ಮಾಹಿತಿ ನೀಡಿತು. ರಾಜ್ಯಕ್ಕೆ ಮೇ 17ರಿಂದ 24ರ ಅವಧಿಗೆ ಆಮ್ಲಜನಕದ ಅವಶ್ಯಕತೆ ಎಷ್ಟಿದೆ. ಸಂಗ್ರಹ ಇರುವ ಪ್ರಮಾಣ ಎಷ್ಟು ಎಂಬ ವಿವರ ಸಲ್ಲಿಸುವಂತೆ ಸರ್ಕಾರಕ್ಕೆ ಪೀಠ ನಿರ್ದೇಶನ ನೀಡಿತು. ಸುಪ್ರೀಂ ಕೋರ್ಟ್ ಆದೇಶದಂತೆ ಆಮ್ಲಜನಕ ಹೆಚ್ಚುವರಿಯಾಗಿ ಸಂಗ್ರಹಿಸಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.