ನವದೆಹಲಿ: ಕರ್ನಾಟಕದಲ್ಲಿ ಅಹಿಂದ ಸಮಾವೇಶಕ್ಕೆ ಆಹ್ವಾನ ನೀಡಿದರೆ ಹೋಗುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಹಿಂದ ಕಾಂಗ್ರೆಸ್ಗೆ ಮುಖ್ಯ ಮತ ಬ್ಯಾಂಕ್. ಸಮಾವೇಶವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ. ಅವರೇ ನಮಗೆಲ್ಲ ಶಕ್ತಿ’ ಎಂದರು.

ಅಧಿಕಾರ ಹಂಚಿಕೆ ಬಗ್ಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಏನು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ತೀರ್ಮಾನ ಮಾಡಿದಾಗ ಸಚಿವ ಸಂಪುಟ ಪುನರ್ ರಚನೆ ಆಗುತ್ತದೆ ಎಂದರು.

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಮಾಡಿರುವ ಬಗ್ಗೆ ಕೇಂದ್ರ ಪರಿಶಿಷ್ಟ ಜಾತಿ ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ರಾಜ್ಯದಲ್ಲಿ ಮೀಸಲಾತಿ ಹೆಚ್ಚಳ ಮಾಡುವಂತೆ ಕೇಂದ್ರ ಸಮಾಜ ಕಲ್ಯಾಣ ಸಚಿವರಿಗೆ ಮನವಿ ಮಾಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.