ನವದೆಹಲಿ: ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರವನ್ನು ಅನಗತ್ಯವಾಗಿ ದೂರುತ್ತಿದೆ. ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ದೂರಿದರು.

ರಾಜ್ಯಸಭೆಯಲ್ಲಿ ಸೋಮವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ. ಅದನ್ನು ಮರೆಮಾಚಿಕೊಳ್ಳಲು ಕೇಂದ್ರವನ್ನು ದೂರುತ್ತಿದೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆಗತಿಯಲ್ಲಿ ಸಾಗಿದೆ’ ಎಂದರು.

ಎತ್ತಿನಹೊಳೆ ಯೋಜನೆ ಕಾರ್ಯಗತ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ಅನೇಕ ತಪ್ಪುಗಳನ್ನು ಮಾಡಿದೆ. ಪರಿಸರಕ್ಕೆ ಧಕ್ಕೆ ತಂದಿದೆ ಹಾಗೂ ಅನೇಕ ಕಾನೂನು, ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪ ಮಾಡಿದ ಅವರು, ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತು. ಆಗ ಜಗದೀಶ್ ಶೆಟ್ಟರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದರು, ಆಗ ಆ ಯೋಜನೆಯ ಅಂದಾಜು ವೆಚ್ಚ ₹8 ಸಾವಿರ ಕೋಟಿ. ಈಗ ಯೋಜನಾ ಮೊತ್ತ ₹33 ಸಾವಿರ ಕೋಟಿಗೆ ಏರಿದೆ. ಈವರೆಗೂ ಒಂದು ಹನಿ ನೀರು ಕೂಡ ಹರಿದಿಲ್ಲ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ತೊಟ್ಟು ನೀರು ಹೋಗಿಲ್ಲ. ಅಷ್ಟೇ ಅಲ್ಲದೆ, ಆ ಯೋಜನೆ ಕಾರ್ಯಕಗತ ಆಗುತ್ತಿರುವ ಹಾಸನ ಜಿಲ್ಲೆಯ ಸಕಲೇಶಪುರಕ್ಕೆ ಹತ್ತಿರದಲ್ಲಿರುವ ಅರಸೀಕರೆಗೇ ನೀರು ಬಂದಿಲ್ಲ. ಈ ಬಗ್ಗೆ ನಾನು ಸಂಪುಟಗಟ್ಟಲೆ ಮಾಹಿತಿ ಇಟ್ಟುಕೊಂಡು ಮಾತನಾಡಬಲ್ಲೆ’ ಎಂದರು.

‘ನಾನು ನೀರಾವರಿ ಸಚಿವನಾಗಿ, ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಈ ಬಗ್ಗೆ ಪೂರ್ಣ ಮಾಹಿತಿ, ಅನುಭವ ಇದೆ. ಮೇಕೆದಾಟು ಯೋಜನೆಗೂ ರಾಜ್ಯ ಸರ್ಕಾರವೇ ಅಡ್ಡಿಯಾಗಿದೆ. ಈ ಯೋಜನೆ ಕಾರ್ಯಗತವಾಗುವ ಪ್ರಸ್ತಾವಿತ ಜಾಗ ನನಗೆ ಗೊತ್ತು. ಒಂದು ಕಡೆ ಆನೆ ಕಾರಿಡಾರ್, ಮತ್ತೊಂಡೆ ಅರಣ್ಯ ಮತ್ತು ನವ್ಯಜೀವಿ ಸಂಪತ್ತು ಇದೆ. ಪ್ರತಿದಿನವೂ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷದಿಂದ ಅಮಾಯಕರು ಬಲಿ ಆಗುತ್ತಿದ್ದಾರೆ. ಇದನ್ನು ತಡೆಯಲು ರಾಜ್ಯ ಸರ್ಕಾರಕ್ಕೆ ಆಗಿಲ್ಲ’ ಎಂದು ಅವರು ಟೀಕಿಸಿದರು.

‘ಯಾವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಕೊಡಬೇಕು ಎಂದು ಸರ್ಕಾರವು ಎತ್ತಿಹೊಳೆ ಯೋಜನೆ ಮೂಲಕ ರೂಪಿಸಿತ್ತೋ, ಈಗ ಆ ಯೋಜನೆ ಕಾರ್ಯಗತವಾಗದೇ ಅದೇ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸದೆ ಮಲೀನ ನೀರನ್ನು ಹರಿಸುತ್ತಿದೆ. ಆ ನೀರು ಮಾನವ ಬಳಕೆ ಯೋಗ್ಯವಲ್ಲದ್ದು. ಇದರ ಪರಿಣಾಮವಾಗಿ ಆ ಭಾಗದಲ್ಲಿ ಬೆಳೆಯುತ್ತಿರುವ ಬೆಳೆಗಳು ಹಾಗೂ ತರಕಾರಿಗಳು ವಿಷಕಾರಿಯಾಗುತ್ತಿದ್ದು, ಅವು ಸೇವನೆಗೆ ಯೋಗ್ಯವಲ್ಲದ್ದಾಗಿವೆ. ಜನರ ಜೀವದ ಜತೆಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

‘ಈ ಎರಡೂ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಪ್ರಧಾನಿ ನರೇದ್ರ ಮೋದಿ ಹಾಗೂ ಕೇಂದ್ರದ ಅರಣ್ಯ ಭೂಪೇಂದ್ರ ಯಾದವ್ ಕೂಡಲೇ ಮಧ್ಯಪ್ರವೇಶಿಸಿ ಸರಿಮಾಡಬೇಕು. ಇಲ್ಲವಾದರೆ ಈ ಜಿಲ್ಲೆಯ ಜನರು ವಿಪರೀತ ಬೆಲೆ ತೆರಲಿದ್ದಾರೆ’ ಎಂದು ಅವರು ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.