ನವದೆಹಲಿ: ‘ನನ್ನ ಮತ್ತು ನರೇಂದ್ರ ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭವಾಯಿತು. ಮೋದಿ ಅಧಿಕಾರಕ್ಕೆ ಬಂದರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಆಗ ನಾನು ಹೇಳಿದ್ದೆ. ಬಿಜೆಪಿ ಗೆದ್ದ ನಂತರ ನಾನು ನಿಜವಾಗಿಯೂ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾದೆ. ಆದರೆ, ಹಾಗೆ ಮಾಡಬೇಡಿ ಎಂದು ಮೋದಿ ತಡೆದರು. ಅವರ ನಡವಳಿಕೆಯಿಂದ ಪ್ರಭಾವಿತನಾದೆ. ಅಂದಿನಿಂದಲೇ ಪರೋಕ್ಷವಾಗಿ ಮೈತ್ರಿ ಶುರುವಾಯಿತು’ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಹೇಳಿದರು.

‘ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ ಅವರ ಜತೆ ಮದುವೆಯಾದರು’ ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವರು ರಾಜ್ಯಸಭೆಯಲ್ಲಿ ಸೋಮವಾರ ತಿರುಗೇಟು ನೀಡಿದರು.

‘ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಖರ್ಗೆ ಈ ವಿಷಯ ಪ್ರಸ್ತಾಪಿಸಿದ್ದಾರೆ. ಅವರಿಗೆ, ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಆದರೆ, ನಿಜವಾಗಿಯೂ ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ’ ಎಂದು ಹರಿಹಾಯ್ದರು.

‘ಕಾಂಗ್ರೆಸ್ ಪಕ್ಷವು ನಮ್ಮ ಪಕ್ಷಕ್ಕೆ ಒಂದಲ್ಲ, ಎರಡಲ್ಲ, ಅನೇಕ ಬಾರಿ ದ್ರೋಹ ಮಾಡಿದೆ. ಅದರ ಬಗ್ಗೆ ನಾನು ಸಾಕ್ಷಿ ಸಹಿತವಾಗಿ ಮಾತನಾಡಬಲ್ಲೆ. ಅದೆಲ್ಲವನ್ನೂ ಮರೆಮಾಚಲು ಖರ್ಗೆ ನನ್ನ ವಿಷಯ ಎಳೆದು ತಂದಿದ್ದಾರೆ’ ಎಂದು ಅವರು ಹೇಳಿದರು.

‘ನಿಜಲಿಂಗಪ್ಪ, ದೇವರಾಜ ಅರಸು, ಬಂಗಾರಪ್ಪ ಅವರಿಗೆ ಏನಾಯಿತು ಎಂಬುದು ಖರ್ಗೆ ಅವರಿಗೂ ಗೊತ್ತಿದೆ. ಅವರು ಹೇಗೆ ಅಧಿಕಾರ ಕಳೆದುಕೊಂಡರು ಎಂಬುದನ್ನು ಖರ್ಗೆ ಹೇಳಬೇಕಾಗುತ್ತದೆ. ಅವರೆಲ್ಲರೂ ಅಧಿಕಾರ ಕಳೆದುಕೊಂಡಿದ್ದಕ್ಕೆ ನಾವು ಸಾಕ್ಷಿಗಳಾಗಿದ್ದೆವು’ ಎಂದು ಟೀಕಾಪ್ರಹಾರ ನಡೆಸಿದರು.

1962ರಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಉದ್ದೇಶಿಸಿದ್ದೆ. ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ಕೊಡುವುದಾಗಿ ಹೇಳಿತ್ತು. ನೀಲಂ ಸಂಜೀವರೆಡ್ಡಿ ಎಐಸಿಸಿ ಅಧ್ಯಕ್ಷರಾಗಿದ್ದರು. ಆದರೆ, ನನಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು. ನನ್ನ ರಾಜಕೀಯದ ಅಂತ್ಯಕಾಲದಲ್ಲಿ ನಾನಿದ್ದೇನೆ. ಇನ್ನೊಂದು ತಿಂಗಳಲ್ಲಿ ರಾಜ್ಯಸಭಾ ಸದಸ್ಯತ್ವ ಮುಗಿಯುತ್ತದೆ. ಹೀಗಾಗಿ, ನಾನು ಖರ್ಗೆ ಪ್ರಶ್ನೆಗೆ ಉತ್ತರ ಕೊಡಬೇಕಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.