ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಬೆಳವಣಿಗೆ ಕಂಡು ಜನತಾ ಪರಿವಾರ ಒಟ್ಟಿಗಿದ್ದ ಕಾಲ ಮೆಲುಕು ಹಾಕಿದ ದೇವೇಗೌಡ

Last Updated 9 ಆಗಸ್ಟ್ 2022, 14:18 IST
ಅಕ್ಷರ ಗಾತ್ರ

ಬೆಂಗಳೂರು: ಜನತಾ ಪರಿವಾರ ಒಟ್ಟುಗೂಡಿಸಲು ಯುವ ಪೀಳಿಗೆ ನಿರ್ಧರಿಸಿದರೆ, ಅದು ಈ ರಾಷ್ಟ್ರಕ್ಕೆ ಉತ್ತಮ ಪರ್ಯಾಯ ಶಕ್ತಿಯಾಗಲಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ.

ಬಿಹಾರದ ರಾಜಕೀಯ ಸ್ಥಿತ್ಯಂತರಗಳ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮಂಗಳವಾರ ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಬಿಹಾರದ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ. ಜನತಾದಳ ಪರಿವಾರ ಒಂದೇ ಸೂರಿನಡಿ ಇದ್ದ ದಿನಗಳನ್ನು ನಾನು ಚಿಂತಿಸುವಂತೆ ಮಾಡಿತು. ಜನತಾದಳ ದೇಶಕ್ಕೆ ಮೂವರು ಪ್ರಧಾನ ಮಂತ್ರಿಗಳನ್ನು ನೀಡಿದೆ. ನಾನು ನನ್ನ ಇಳಿವಯಸ್ಸಿನಲ್ಲಿದ್ದೇನೆ. ಆದರೆ, ಯುವ ಪೀಳಿಗೆ ನಿರ್ಧರಿಸಿದರೆ ಈ ಮಹಾನ್ ರಾಷ್ಟ್ರಕ್ಕೆ ಉತ್ತಮ ಪರ್ಯಾಯ ಶಕ್ತಿಯೊಂದು ಸಿಗಲಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ವರಿಷ್ಠ ನಿತೀಶ್‌ ಕುಮಾರ್‌ ಅವರು ಮಂಗಳವಾರ ರಾಜೀನಾಮೆ ನೀಡಿದರು. ಜೆಡಿಯು, ಆರ್‌ಜೆಡಿ, ಕಾಂಗ್ರೆಸ್‌ ಪಕ್ಷಗಳು ಅಲ್ಲಿ ಹೊಸ ಸರ್ಕಾರ ರಚಿಸುವ ಸಾಧ್ಯತೆಗಳಿದ್ದು, ನಿತೀಶ್‌ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಲಾಗಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT