ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜನ್ಮದಿನ ಆಚರಿಸಿಕೊಳ್ಳುವುದಿಲ್ಲ: ಎಚ್.ಡಿ. ದೇವೇಗೌಡ

Published 16 ಮೇ 2024, 16:20 IST
Last Updated 16 ಮೇ 2024, 16:20 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಇದೇ 18ರಂದು 92 ನೇ ವರ್ಷಕ್ಕೆ ಕಾಲಿಡುತ್ತಿದ್ದು, ಕಾರಣಾಂತರಗಳಿಂದ ತಮ್ಮ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಯಾವುದೇ ಆಚರಣೆ ಮಾಡಿಕೊಳ್ಳದೇ ಇರುವುದರಿಂದ ಎಲ್ಲರೂ ತಾವಿದ್ದಲ್ಲಿಯೇ ಹಾರೈಸಿ ಎಂದು ಮಾಧ್ಯಮ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

‘ವಿಧಾನಪರಿಷತ್ತಿನ ಚುನಾವಣೆಯಲ್ಲಿ ಜೆಡಿಎಸ್–ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು’ ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT