ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಸ್ ಸ್ವಾಧೀನದಲ್ಲಿರುವ ಹೆಚ್ಚುವರಿ ಜಮೀನು ವಾಪಸ್ ಪಡೆಯಿರಿ: ದೇವೇಗೌಡ ಸವಾಲು

Published 25 ಜುಲೈ 2023, 9:43 IST
Last Updated 25 ಜುಲೈ 2023, 9:43 IST
ಅಕ್ಷರ ಗಾತ್ರ

ಬೆಂಗಳೂರು: 'ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ನೈತಿಕತೆಯ ಪಾಟ ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ನೈಸ್ ಕಂಪನಿ ಸ್ವಾಧೀನದಲ್ಲಿರುವ 11,660 ಎಕರೆ ಹೆಚ್ಚುವರಿ ಜಮೀನನ್ನು ವಾಪಸ್ ಪಡೆಯಲಿ' ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸವಾಲು ಹಾಕಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಪತ್ರಕರ್ತರನ್ನುದ್ದೇಶಿ ಮಾಡಿದ್ದ ಭಾಷಣದ ಪತ್ರಿಕಾ ವರದಿಯನ್ನು ಪ್ರದರ್ಶಿಸಿದರು.

'ಪತ್ರಕರ್ತರು ನೈತಿಕತವಾಗಿ ಸರಿ ಇರಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ನೈತಿಕತೆ ಇವರಿಗೂ ಇರಬೇಕಲ್ಲವೆ? ಹಾಗಿದ್ದರೆ ನೈಸ್ ಅಕ್ರಮದ ವಿರುದ್ದ ಟಿ.ಬಿ. ಜಯಚಂದ್ರ ನೇತೃತ್ವದ ಸದನ ಸಮಿತಿ ಶಿಫಾರಸುಗಳನ್ನು ಜಾರಿಗೆ ತರಲಿ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರಿಗಳ‌ ಸಮಿತಿ ನೀಡಿರುವ ವರದಿಯೂ ಇದೆ. ಅನುಷ್ಠಾನಕ್ಕೆ ತರಲಿ' ಎಂದು ಆಗ್ರಹಿಸಿದರು.

ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಬೇಕಿರುವ ಸಂಪನ್ಮೂಲವನ್ನು ನೈಸ್ ಕಂಪನಿಯಿಂದ ವಾಪಸ್ ಪಡೆದ ಜಮೀನಿನಲ್ಲೇ ಸಂಗ್ರಹಿಸಬಹುದು. ಕೋಟ್ಯಂತರ ರೂಪಾಯಿ ಸಂಗ್ರಹಿಸಲು ಅವಕಾಶ ಆಗುತ್ತದೆ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT