ನವದೆಹಲಿ: ‘ನದಿ ಜಲ ಸಂಪನ್ಮೂಲ ಸದ್ವಿನಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಆದ್ದರಿಂದ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆಗ್ರಹಿಸಿದರು.

ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಮತ್ತೊಮ್ಮೆ ಗಮನ ಸೆಳೆದರು.

ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್ಗಳು ಬಡ ನಿವಾಸಿಗಳನ್ನು ಶೋಷಿಸುತ್ತಿವೆ ಎಂಬ ಅಂಶವನ್ನು ಸದನದ ಗಮನಕ್ಕೆ ತಂದ ಅವರು, ಹಣಕಾಸು ಸಚಿವರು ಕುಡಿಯುವ ನೀರಿನ ಯೋಜನೆಗಳಿಗೆ ₹1,400 ಕೋಟಿ ಮಂಜೂರು ಮಾಡಿದ್ದಾರೆ. ಆದರೆ, ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೋದಾವರಿ-ಕಾವೇರಿ ಜೋಡಣೆಗೆ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಿಂದ ಯುವಜನರು ನಗರಗಳಿಗೆ ವಲಸೆ ಬರುವ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ಜನಸಂಖ್ಯೆ ಈಗ 1.40 ಕೋಟಿಗೆ ಮುಟ್ಟಿದೆ. ಎಲ್ಲ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ. ಇದು ಜೀವನೋಪಾಯದ ಸಮತೋಲನವನ್ನು ತಪ್ಪಿಸುತ್ತಿದೆ. ಯುವಕರಿಗೆ ತಮ್ಮ ಪ್ರದೇಶಗಳಿಗಳಲ್ಲಿಯೇ ಹೆಚ್ಚೆಚ್ಚು ಉದ್ಯೋಗಾವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.

ಕೃಷಿ ಉತ್ಪನ್ನಗಳಿಗೆ ಹೆಚ್ಚು ಬೆಂಬಲ ನೀಡುವುದನ್ನು ನಾವು ಮುಂದುವರಿಸಬೇಕು. ಬಿಹಾರದಲ್ಲಿ ಮಖಾನಾ ಮಂಡಳಿ ರಚನೆ ಮಾಡಿರುವುದನ್ನು ಸ್ವಾಗತಿಸುತ್ತೇನೆ. ಅದೇ ರೀತಿ ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.