ಬೆಂಗಳೂರು: ‘ಎಚ್.ಡಿ.ದೇವೇಗೌಡ ಅವರು ಆರೋಗ್ಯವಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಾರೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮ್ಮ ತಂದೆಯವರನ್ನು ಗುರುವಾರ ರಾತ್ರಿ ಭೇಟಿ ಮಾಡಿದ ನಂತರ ಕುಮಾರಸ್ವಾಮಿ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆತಂಕಪಡಬೇಡಿ. ತಂದೆಯವರಿಗೆ ಆರೋಗ್ಯದ ಸಮಸ್ಯೆ ಇಲ್ಲ. ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.