ಎಚ್.ಡಿ.ಕೋಟೆ: ಪಟ್ಟಣದ ಆಡಳಿತ ಸೌಧದಲ್ಲಿ ಆಯೋಜಿಸಿದ್ದ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಮತ್ತು ತಾಲ್ಲೂಕಿನ ಮಾದಿಗ ಸಮುದಾಯದ ಮುಖಂಡರು ಬಾಬೂಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಇದೇ ವೇಳೆ ಮಾದಿಗ ಸಮುದಾಯದ ಮುಖಂಡರು ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸಭಾ ಕಾರ್ಯಕ್ರಮದಿಂದ ಹೊರ ನಡೆದರು.

‘ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ, ಒಳ ಮೀಸಲಾತಿಯ ಹೋರಾಟಕ್ಕೆ ಜಯವಾಗಲಿ’ ಎಂದು ಮಾದಿಗ ಸಮುದಾಯದ ಮುಖಂಡರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಪ್ರತಿಭಟಿಸಿದರು.

ಡಾ. ಬಾಬು ಜಗಜೀವನ್ ರಾಂ ವಿಚಾರ ವೇದಿಕೆಯ ಅಧ್ಯಕ್ಷ ಸಿ. ತಿಮ್ಮಯ್ಯ ಮಾತನಾಡಿ, ನಾವು ಪುಷ್ಪಾರ್ಚನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಿ ಹೊರ ಬರುತ್ತಿರುವ ಉದ್ದೇಶ ನಮ್ಮ ಜನಾಂಗದ ಬಹು ದಿನಗಳ ಬೇಡಿಕೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಪ್ರತಿಭಟನೆಯ ಮಾರ್ಗವಾಗಿದೆ ಎಂದರು.

‘ಸುಮಾರು 35 ವರ್ಷಗಳಿಂದ ನಮ್ಮ ಸಮುದಾಯ ಹೋರಾಟವನ್ನು ಮಾಡಿದೆ, ಆದರೆ ಕಾಂಗ್ರೆಸ್ ಸರ್ಕಾರ ಕೆಲವು ಜನಾಂಗದ ಹಿತಕ್ಕಾಗಿ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ. ಡಿ.ದೇವರಾಜು ಅರಸು ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಉಳುವವನೇ ಭೂಮಿಯ ಒಡೆಯ ಕಾನೂನನ್ನು ಜಾರಿಗೆ ತಂದಾಗ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಯಿತು. ಅದನ್ನು ಅವರು ತಲೆಗೆ ಹಾಕಿಕೊಳ್ಳಲಿಲ್ಲ, ಹಾಗೆಯೇ ಹಿಂದುಳಿದ ನಾಯಕ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು’ ಎಂದರು.

ಮಾಜಿ ಅಧ್ಯಕ್ಷ ಪಿ. ನಾಗರಾಜು ಮಾತನಾಡಿ, ರಾಜ್ಯಪಾಲರ ಅಂಕಿತವಾಗಿದ್ದರೂ ಒಳಮೀಸಲಾತಿ ಜಾರಿಗೆ ವಿಳಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಬೇಸರಿಸಿದರು.

ಶೇ 15 ಮೀಸಲಾತಿಗೆ ಒಳ ಮೀಸಲಾತಿ ಜಾರಿ ಮಾಡಿ 56,432 ಹುದ್ದೆಗಳನ್ನು ಭರ್ತಿ ಮಾಡಬೇಕು. ಫೆಬ್ರುವರಿ 27ರಂದು ಒಳ ಮೀಸಲಾತಿ ಸಂಬಂಧ ಕರೆದಿದ್ದ ಸಚಿವ ಸಂಪುಟ ಸಭೆಯನ್ನು ನೀತಿ ಸಂಹಿತೆ ಜಾರಿ ನೆಪ ಹೇಳಿ ಮುಂದೂಡಿದ ಸರ್ಕಾರದ ನಡೆ ನಮಗೆ ಬೇಸರ ತಂದಿದೆ. ಧಾರವಾಡ ವಿವಿಯಲ್ಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಸರ್ಕಾರ ಒಂದೇ ದಿನದಲ್ಲಿ ಉದ್ಯೋಗ ತುಂಬಲು ಆಶ್ವಾಸನೆ ನೀಡುತ್ತದೆ. ಆದರೆ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ಹಿಂದೇಟು ಹಾಕುತ್ತಿದೆ. ಸಮುದಾಯಕ್ಕೆ ಇದೇ ರೀತಿ ಅನ್ಯಾಯ ಮಾಡುತ್ತಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳಿಸುವ ಕೆಲಸವನ್ನು ಈ ಸಮುದಾಯ ಮಾಡುತ್ತದೆ ಎಂದು ಎಚ್ಚರಿಸಿದರು.ಪರಶಿವಮೂರ್ತಿ, ಉಡ ನಾಗರಾಜ್, ಶಿವಯ್ಯ, ಮಹದೇವಯ್ಯ, ಚೆಲುವರಾಜು, ಡಿ. ನಾಗರಾಜು, ಸೋಮು ಪಟೇಲ್, ಶಿವರಾಜ್, ಕೆ.ಟಿ. ಹರೀಶ್, ಕಾಳಪ್ಪಾಜಿ ಸಿ, ಬೆಟ್ಟಸ್ವಾಮಿ, ಶಿವರಾಜ್, ಗಿರಿ ಪ್ರಸಾದ್, ದೇವನಾಥ್, ಮಹದೇವು, ರವೀಶ್, ಶಿವಲಿಂಗಯ್ಯ, ನಾಗೇಂದ್ರ, ಕಾಳಯ್ಯ, ಚೇತನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-38-1538486192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.