ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಯುರ್ವೇದ ಚಿಕಿತ್ಸೆ ಪಡೆಯಲು ಭಾನುವಾರ ರಾತ್ರಿ
ವಿಶೇಷ ವಿಮಾನದಲ್ಲಿ ಉಡುಪಿಗೆ ತೆರಳಿದರು.

ಉಡುಪಿ ಸಮೀಪದ ಕಾಪುವಿನಲ್ಲಿರುವ ಆಯುರ್ವೇದ ಚಿಕಿತ್ಸಾಲಯವೊಂದರಲ್ಲಿ ಅವರು ಚಿಕಿತ್ಸೆ ಪಡೆಯಲಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ತಕ್ಷಣವೇ ಅವರು ಇದೇ ಚಿಕಿತ್ಸಾ ಕೇಂದ್ರಕ್ಕೆ ಹೋಗಿದ್ದರು.

ಆ ಸಂದರ್ಭದಲ್ಲಿ ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟದಿಂದಾಗಿ ಜೆಡಿಎಸ್ ಕಾರ್ಯಕರ್ತರು ಮೃತಪಟ್ಟಿದ್ದರಿಂದ ಬೇಸರಗೊಂಡು ಚಿಕಿತ್ಸೆ ಪೂರ್ಣಗೊಳಿಸದೇ ಹಿಂದಕ್ಕೆ ಬಂದಿದ್ದರು. ಈಗ ಚಿಕಿತ್ಸೆ ಮುಂದುವರಿಸಲು ವಾಪಸ್ ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.