ಶಿವಮೊಗ್ಗ: ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಯಾರೆಂಬುದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮಂಗಳವಾರ ಘೋಷಿಸಿದರು.

ಭದ್ರಾವತಿ ಸಮೀಪದ ಗೋಣಿಬೀಡಿನಲ್ಲಿ ಮಂಗಳವಾರ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುವುದು. ಈಗಾಗಲೇ ಭದ್ರಾವತಿ ಕ್ಷೇತ್ರದ ಜನರು ನಿರ್ಧಾರ ಮಾಡಿದ್ದಾರೆ. ಜನರ ಭಾವನೆಗಳಿಗೆ ಪಕ್ಷ ಮನ್ನಣೆ ನೀಡುತ್ತದೆ,’ ಎಂದು ಹೇಳಿದರು.

‘27ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 140 ವಿಧಾನಸಭಾ ಕ್ಷೇತ್ರಗಳ ಆಕಾಂಕ್ಷಿಗಳು ಭಾಗವಹಿಸುವರು. ಅಲ್ಲಿ ಎಲ್ಲಾ ವಿಚಾರ ಚರ್ಚೆ ಮಾಡುತ್ತೇವೆ’ ಎಂದು ವಿವರ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.