ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಕಳ್ಳತನ ಆರೋಪ– ದಂಡ ಕಟ್ಟುವೆ, ಯಾವುದೇ ಕ್ರಮಕ್ಕೆ ಸಿದ್ಧ: ಕುಮಾರಸ್ವಾಮಿ

Published 14 ನವೆಂಬರ್ 2023, 9:40 IST
Last Updated 14 ನವೆಂಬರ್ 2023, 9:40 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯುತ್ ಕಳ್ಳತನ ಮಾಡಿದ್ದಾರೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ಅಚಾತುರ್ಯದಿಂದ ಆದ ಘಟನೆ. ದಂಡ ಕಟ್ಟುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ.

ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್‌ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕರ್ನಾಟಕ ಕಾಂಗ್ರೆಸ್‌ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ.
– ಎಚ್‌.ಡಿ ಕುಮಾರಸ್ವಾಮಿ, ಜೆಡಿಎಸ್‌ ಶಾಸಕಾಂಕ ಪಕ್ಷದ ನಾಯಕ
ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ
ಎಕ್ಸ್‌ ‍ಪೋಸ್ಟ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನು ಗುರಿ ಮಾಡಿರುವ ಎಚ್‌.ಡಿ ಕುಮಾರಸ್ವಾಮಿ, ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ. ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT