ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಪರಿಹಾರ ಪ್ಯಾಕೇಜ್ ಪ್ರಚಾರದ ತಂತ್ರ: ಎಚ್‌ಡಿಕೆ ವಾಗ್ದಾಳಿ

Last Updated 10 ಮೇ 2020, 20:15 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊರೊನಾ ಪರಿಹಾರವಾಗಿ ರಾಜ್ಯ ಸರ್ಕಾರ ₹ 1,610 ಕೋಟಿ ಪ್ಯಾಕೇಜ್ ಘೋಷಣೆ ಮಾಡಿರುವುದು ಕೇವಲ ಪ್ರಚಾರಕಷ್ಟೇ. ಅದರಿಂದ ಬಡವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಭಾನುವಾರ ಮಾತನಾಡಿದ ಅವರು, ‘ಕೊರೊನಾ ವಿಚಾರದಲ್ಲಿ ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆದರೆ, ಇದು ಕೇವಲ ಮೋಸದ ಪರಿಹಾರ’ ಎಂದು ಟೀಕಿಸಿದರು.

‘ನೆರೆ ಹಾವಳಿ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ್ದ ಪರಿಹಾರ ಫಲಾನುಭವಿಗಳಿಗೆ ತಲುಪಿಲ್ಲ. ಈ ಹಿಂದೆ ಮೋಸ ಮಾಡಿದ ರೀತಿಯಲ್ಲಿಯೇ ಈ ಪರಿಹಾರ ಕೂಡಾ ಮುಂದುವರಿದಿದೆ’ ಎಂದು ಆರೋಪಿಸಿದರು.

‘ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡುವಾಗ ಮಾರ್ಗಸೂಚಿಯನ್ನು ಮೊದಲೇ ಮಾಡಿದ್ದೆವು. ಅದರಿಂದ ರೈತರಿಗೆ ಅನುಕೂಲವಾಯಿತು. ಆದರೆ, ಯಡಿಯೂರಪ್ಪ ಘೋಷಿಸಿರುವ ಪರಿಹಾರ ಯಾರಿಗೆ ಹೇಗೆ ತಲುಪಲಿದೆ ಎಂಬ ಮಾಹಿತಿಯೇ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT