‘ಸ್ಥಾನಮಾನಕ್ಕಾಗಿ ಕಾನೂನುಬಾಹಿರ ಕೆಲಸ’
ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕೆಲಸ ಮಾಡಿಸುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರೂ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕಾನೂನುಬಾಹಿರ ಕೆಲಸ ಮಾಡಿಸುತ್ತಿದ್ದಾರೆ. ಸರ್ಕಾರ ಸರಿ ಇಲ್ಲ. ಚುಕ್ಕಾಣಿ ಹಿಡಿದವರೂ ಸರಿ ಇಲ್ಲ ಎಂದು ಕುಮಾರಸ್ವಾಮಿ ದೂರಿದರು. ಕೆಲ ಅಧಿಕಾರಿಗಳು ಬಡ್ತಿ ಉತ್ತಮ ಸ್ಥಳಗಳ ನಿರೀಕ್ಷೆಯಲ್ಲಿ ಕಾನೂನು ಬಾಹಿರ ಕೆಲಸ ಮಾಡಿದಾಗ ಪ್ರತಿಫಲ ಅನುಭವಿಸಬೇಕಾಗುತ್ತದೆ. ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಈಚೆಗೆ ‘ಕಳಪೆ ಕಾಮಗಾರಿ; ಆರು ಮಂದಿ ಹೊಣೆ’ ಎನ್ನುವ ವರದಿ ಓದಿದೆ. ವಿಕಾಸಸೌಧ ನಿರ್ಮಾಣದಲ್ಲಿ ಎಂಜಿನಿಯರುಗಳು ನಡೆಸಿರುವ ಅಕ್ರಮ ಬಯಲಾಗಿದೆ. ಅಧಿಕಾರಿಗಳು ಜನಪ್ರತಿನಿಧಿಗಳ ಒತ್ತಡಕ್ಕೆ ಕೆಲಸ ಮಾಡಬಾರದು. ಕಾನೂನು ಆತ್ಮಸಾಕ್ಷಿಯಂತೆ ಕೆಲಸ ಮಾಡಬೇಕು’ ಎಂದರು.